ರಾಮಮಂದಿರ ಶಿಲಾನ್ಯಾಸದ ವೇಳೆ ಅಯೋಧ್ಯೆಯಲ್ಲಿ ದಾಳಿಗೆ ಉಗ್ರರ ಸಂಚು; ಉಗ್ರರಿಗೆ ಐಎಸ್ಐ ತರಬೇತಿ: ಗುಪ್ತಚರ ಇಲಾಖೆ
ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಶಿಲಾನ್ಯಾಸದ ಕಾರ್ಯಕ್ರಮದ ವೇಳೆ ದಾಳಿ ನಡೆಸಲು ಉಗ್ರರು ಸಂಚು ನಡೆಸಿದ್ದು ಉಗ್ರರಿಗೆ ಐಎಸ್ಐ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಅಯೋಧ್ಯೆ ಇಲ್ಲದೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ(ಐಎಸ್ಐ) ನೆರವಿನೊಂದಿಗೆ ಭಾರತದಲ್ಲಿ ವಿಧ್ವಂಸಕ ಸೃಷ್ಟಿಸಲು ಸಂಚು ರೆಡಿಯಾಗಿದೆ ಎಂದು ಗುಪ್ತಚರ ಇಲಾಖೆ ಕೇಂದ್ರಕ್ಕೆ ಮಾಹಿತಿ ನೀಡಿದೆ.
ಭಾರತದಲ್ಲಿನ ಪ್ರಸಿದ್ಧ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಆಫ್ಗಾನಿಸ್ತಾನದ ಲಷ್ಕರ್ ಇ ತೊಯ್ಬಾ ಹಾಗೂ ಜೈಷ್ ಎ ಮೊಹಮ್ಮದ್ ಸಂಘಟನೆಗಳು ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕಾಗಿ 3ರಿಂದ 5 ಗುಂಪು ಭಾರತಕ್ಕೆ ನುಗ್ಗಲಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಧಾರ್ಮಿಕ ಕ್ಷೇತ್ರಗಳು ಮತ್ತು ರಾಜಕೀಯ ಮುಖಂಡರ ಮೇಲೆ ದಾಳಿ ಮಾಡಿ ಇದನ್ನು ಆಂತರಿಕ ದಾಳಿ ಎಂದು ಬಿಂಬಿಸಲು ಸಂಚು ರೂಪಿಸಿದ್ದು ಇದು ಅತ್ಯಂತ ಅಪಾಯಕಾರಿಯಾದದ್ದು ಎಂದು ಇಲಾಖೆ ಎಚ್ಚರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


