ದೇಶ

ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ, ಕೊಲೆ: ಸುಬ್ರಮಣಿಯನ್ ಸ್ವಾಮಿ ನೀಡಿದ ಕಾರಣ ಇಂತಿವೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದ ಸುಬ್ರಮಣಿನ ಸ್ವಾಮಿ ಹೇಳಿದ್ದಾರೆ.

ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ, ಕೊಲೆ: ಸುಬ್ರಮಣಿಯನ್ ಸ್ವಾಮಿ ನೀಡಿದ ಕಾರಣ ಇಂತಿವೆ
ಸುಬ್ರಮಣಿಯನ್ ಸ್ವಾಮಿ
Published On :

ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದ ಸುಬ್ರಮಣಿನ ಸ್ವಾಮಿ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸ್ವಾಮಿ, ಸುಶಾಂತ್ ಸಾವು ಕೊಲೆ ಎಂದು ಹೇಳಲು ಹಲವು ಕಾರಣ ನೀಡಿದ್ದಾರೆ. ಇದರ ಜೊತೆಗೆ ಟ್ವೀಟ್ ನಲ್ಲಿ 26 ಅಂಶಗಳಿರುವ ಪೋಟೋ ಹಾಕಿದ್ದಾರೆ.

ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಸ್ವಾಮಿ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರ ಕಾಲ ಕೆಳಗೆ ಒಂದು ಚೇರ್ ಇತ್ತು, ಯಾರೋ ಸುಶಾಂತ್ ನನ್ನು ನೇಣಿಗೇರಿಸಿ ನಂತರ ಆ ಟೇಬಲ್ ಅನ್ನು  ಆತನ ಕಾಲ ಕೆಳಗೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.

ಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದು ಹೇಳಿದ್ದಾರೆ, ಈ ಸಂಬಂಧ ಬಿಹಾರ ಸಿಎಂ ನಿತೀಶ್ ಕುಮಾರ್ ಜೊತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.