ವಿಧಿ 370 ರದ್ಧತಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ
ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮುಫ್ತಿ ಮೆಹಬೂಬ ಅವರ ಗೃಹ ಬಂಧನ ಅವಧಿಯನ್ನು ಮತ್ತೆ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಆದೇಶಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ರ ರದ್ಧತಿ ವೇಳೆ ಅಲ್ಲಿನ ರಾಜಕೀಯ ನಾಯಕರನ್ನು ಕೇಂದ್ರ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರು ಗೃಹ ಬಂಧನಲ್ಲಿಟ್ಟಿದ್ದರು. ಈ ಆದೇಶದ ಪೈಕಿ ಮುಫ್ತಿ ಮೆಹಬೂಬಾ ಕಣಿವೆ ರಾಜ್ಯದಲ್ಲಿ ಗೃಹ ಬಂಧನಕ್ಕೀಡಾದ ಮೊದಲ ರಾಜಕೀಯ ನಾಯಕರಾಗಿದ್ದಾರೆ. ಬಳಿಕ ಒಮರ್ ಅಬ್ದುಲ್ಲಾ ಸೇರಿದಂತೆ ಎಲ್ಲ ಪ್ರತ್ಯೇಕತಾವಾದಿ ನಾಯಕರನ್ನು ಸರ್ಕಾರ ಗೃಹ ಬಂಧನದಲ್ಲಿರಿಸಿತ್ತು.
ತಿಂಗಳ ಹಿಂದಷ್ಟೇ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಹಾಗೂ ಮಾಜಿ ಸಿಎಂ ಓಮರ್ ಅಬ್ದುಲ್ಲಾ, ಅವರ ತಂದೆ ಮಾಜಿ ಕೇಂದ್ರ ಸಚಿವ ಫಾರೂಕ್ ಅಬ್ದುಲ್ಲಾ ಅವರನ್ನು ಷರತ್ಥು ಬದ್ಧ ಅನುಮತಿ ಮೇರೆಗೆ ಬಿಡುಗಡೆ ಮಾಡಲಾಗಿತ್ತು. ಇಂದು ಬೆಳಗ್ಗೆ ಮಾಜಿ ಪ್ರತ್ಯೇಕತಾವಾದಿ ಮತ್ತು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಸಜ್ಜದ್ ಲೋನ್ ರನ್ನು ಕೂಡ ಗೃಹ ಬಂಧನದಿಂದ ಮುಕ್ತ ಮಾಡಿದೆ.
ಆದರೆ ಕಾಶ್ಮೀರದ ಮತ್ತೋರ್ವ ಪ್ರಭಾವಿ ರಾಜಕೀಯ ನಾಯಕರಾದ ಪಿಡಿಪಿ ಅಧ್ಯಕ್ಷೆ ಮುಫ್ತಿ ಮೆಹಬೂಬಾ ಅವರ ಗೃಹ ಬಂಧನ ಅವಧಿಯನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಮೂರು ತಿಂಗಳ ಕಾಲ ಸರ್ಕಾರ ವಿಸ್ತರಣೆ ಮಾಡಿದೆ. ಇದೇ ಆಗಸ್ಟ್ 5ರಂದು ಮುಫ್ತಿ ಮೆಹಬೂಬಾ ಅವರ ಗೃಹ ಬಂಧನದ ಅವಧಿ ಮುಕ್ತಾಯವಾಗಬೇಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


