ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ ಆಗಸ್ಟ್ 31ರ ವರೆಗೆ ವಿಸ್ತರಣೆ
ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಶುಕ್ರವಾರ ತಿಳಿಸಿದೆ.

ನವದೆಹಲಿ: ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಶುಕ್ರವಾರ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳನ್ನು ಆಗಸ್ಟ್ 31 ರ ರಾತ್ರಿ 11.59ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಆದೇಶ ಸರಕು ವಿಮಾನಗಳು ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ತಿಳಿಸಿದೆ.
ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.
ಮೇ 25ರಿಂದ ದೇಶಿಯ ವಿಮಾನ ಹಾರಾಟ ಆರಂಭವಾಗಿದೆ. ಆದರೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


