ನಟ ಸುಶಾಂತ್ ಸಿಂಗ್ ಸಾವು: ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿದ ಇಡಿ
ಬಾಲಿವಿಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ಕೇಸ್ ದಾಖಲಿಸಿದ್ದಾರೆ.

ನವದೆಹಲಿ: ಬಾಲಿವಿಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮನಿ ಲಾಂಡರಿಂಗ್ (ಅಕ್ರಮ ಹಣ ವರ್ಗಾವಣೆ) ಕೇಸ್ ದಾಖಲಿಸಿದ್ದಾರೆ.
ನಟಿ ರಿಯಾ ಚಕ್ರವರ್ತಿ ಮತ್ತು ಇತರರು ತನ್ನ ಮಗನ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ಬಿಹಾರ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬಿಹಾರ ಪೊಲೀಸರು ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ಅಧಿಕಾರಿಗಳು ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವು ಮತ್ತು ಅಕ್ರಮ ಹಣ ವಹಿವಾಟಿಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ಹಣ ಮತ್ತು ಅವರ ಬ್ಯಾಂಕ್ ಖಾತೆಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ಇಡಿ ತನಿಖೆ ನಡೆಸಲಿದೆ. ಇಡಿ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ರಿಯಾ ಚಕ್ರವರ್ತಿ ಮತ್ತು ಇತರರನ್ನು ಮುಂದಿನ ವಾರ ವಿಚಾರಣೆಗೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನ್ನ ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೃಷ್ಣ ಕುಮಾರ್ ಸಿಂಗ್ ಅವರು ನಟಿ ರಿಯಾ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಇತರ ಆರು ಜನರ ವಿರುದ್ಧ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


