ದೇಶದಲ್ಲಿ ಒಂದೇ ದಿನ 8,380 ಮಂದಿಗೆ ಕೊರೋನಾ ವೈರಸ್ ದೃಢ, ಸೋಂಕಿತರ ಸಂಖ್ಯೆ 1.90 ಲಕ್ಷಕ್ಕೆ ಏರಿಕೆ, 5,394 ಮಂದಿ ಸಾವು
ದೇಶದಲ್ಲಿ ಕೊರೋನಾ ರಣಕೇಕೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನ ಬರೋಬ್ಬರಿ 8,380 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1.90 ಲಕ್ಷಕ್ಕೇರಿದೆ, ಅಲ್ಲದೆ, ಸಾವಿನ ಸಂಖ್ಯೆ 5,394ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ರಣಕೇಕೆ ಹೆಚ್ಚಾಗುತ್ತಲೇ ಇದ್ದು, ಒಂದೇ ದಿನ ಬರೋಬ್ಬರಿ 8,380 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1.90 ಲಕ್ಷಕ್ಕೇರಿದೆ, ಅಲ್ಲದೆ, ಸಾವಿನ ಸಂಖ್ಯೆ 5,394ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 8,380 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 190,535ಕ್ಕೆ ಏರಿಕೆಯಾಗಿದ್ದು, ಈ ಮೂಲಕ ವಿಶ್ವದ ಟಾಪ್ 10 ಕೊರೋನಾಪೀಡಿತ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು 2 ಸ್ಥಾನ ಜಿಗಿದು 7ನೇ ಸ್ಥಾನಕ್ಕೇರಿಕೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೊರೋನಾ ವರ್ಲ್ಡೋಮೀಟರ್ಸ್ ವೆಬ್'ಸೈಟ್ ತಿಳಿಸಿವೆ.
ಈ ನಡುವೆ ನಿನ್ನೆ ಒಂದೇ ದಿನ ಮಹಾಮಾರಿ ವೈರಸ್'ಗೆ 230 ಮಂದಿ ಬಲಿಯಾಗಿದ್ದಾರೆ. ಲಾಕ್'ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಕಡಿಮೆಯಿದ್ದ ಸೋಂಕಿನ ಪ್ರಮಾಣ ಸಂಖ್ಯೆ ಇದೀಗ ಅಧಿಕಗೊಂಡಿದ್ದು, ಭಾರತ ಇದೇ ವೇಗದಲ್ಲಿ ಹೋಗಿದ್ದೇ ಆದರೆ, 2.33 ಲಕ್ಷ ಪ್ರಕರಣಗಳಿರುವ ಇಟಲಿಯನ್ನೂ 4 ದಿನದಲ್ಲಿ ಹಿಂದಿಕ್ಕಿ 6ನೇ ಸ್ಥಾನಕ್ಕೆ ಜಿಗಿಯುವ ಅಪಾಯವು ಕಂಡು ಬರುತ್ತಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ 1,90,535 ಮಂದಿ ಸೋಂಕಿತರ ಪೈಕಿ 91, 819 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿನ್ನೂ 93,322 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


