ಎಲೆಕ್ಟ್ರಾನಿಕ್ ಉತ್ಪನ್ನಗಳ ಸ್ವಾವಲಂಬನೆಗೆ ಕೇಂದ್ರದಿಂದ 50 ಸಾವಿರ ಕೋಟಿ ರೂ. ಮೌಲ್ಯದ 3 ಯೋಜನೆ ಘೋಷಣೆ
ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ವೇಗ ನೀಡಲು ಮತ್ತು ಮೊಬೈಲ್ ಫೋನ್ ಉತ್ಪಾದನೆಯಲ್ಲಿ ದೇಶವನ್ನು ವಿಶ್ವದರ್ಜೆಗೇರಿಸುವ ಗುರಿಯೊಂದಿಗೆ 50 ಸಾವಿರ ಕೋಟಿ ರೂ. ಮೊತ್ತದ ಮೂರು ಹೊಸ ಯೋಜನೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.

ನವದೆಹಲಿ: ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ವೇಗ ನೀಡಲು ಮತ್ತು ಮೊಬೈಲ್ ಫೋನ್ ಉತ್ಪಾದನೆಯಲ್ಲಿ ದೇಶವನ್ನು ವಿಶ್ವದರ್ಜೆಗೇರಿಸುವ ಗುರಿಯೊಂದಿಗೆ 50 ಸಾವಿರ ಕೋಟಿ ರೂ. ಮೊತ್ತದ ಮೂರು ಹೊಸ ಯೋಜನೆಗಳನ್ನು ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಯೋಜನೆ ಘೋಷಿಸಿದ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಸಚಿವ ರವಿಶಂಕರ್ ಪ್ರಸಾದ್, ಕಳೆದ ಆರು ವರ್ಷಗಳಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಬೇಡಿಕೆ ಹೆಚ್ಚಿದೆ ಮತ್ತು ವಿಶ್ವದಲ್ಲಿ ಭಾರತ ಎರಡನೇ ಅತಿ ಹೆಚ್ಚು ಮೊಬೈಲ್ ಫೋನ್ ಉತ್ಪಾದಿಸುವ ದೇಶವಾಗಿದೆ ಎಂದರು.
ಮುಂದಿನ ಕೆಲ ವರ್ಷಗಳಲ್ಲಿ ಭಾರತ ಶ್ರೇಷ್ಠ ದೇಶವಾಗುವ ಗುರಿ ಹೊಂದಿದೆ. ಕಳೆದ 6 ವರ್ಷಗಳಲ್ಲಿ ನಮ್ಮ ಸಾಧನೆ ತೃಪ್ತಿದಾಯಕವಾಗಿದ್ದು, ಇದು ನಮಗೆ ಸಾಕಷ್ಟು ಭರವಸೆಗಳನ್ನು ನೀಡಿದೆ ಎಂದು ಹೇಳಿದರು.
ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಐದು ವಿಶ್ವ ದರ್ಜೆ ಮತ್ತು ಹಲವು ರಾಷ್ಟ್ರೀಯ ಮಟ್ಟದ ಕಂಪನಿಗಳನ್ನು ಸ್ಥಾಪಿಸಲು ಈ ಹೊಸ ಯೋಜನೆಗಳು ನೆರವಾಗಬಲ್ಲವು ಎಂದರು.
ಉತ್ಪಾದನಾ ಸಂಪರ್ಕದ ಉಪಕ್ರಮ (ಪಿಎಲ್ಐ) ಯೋಜನೆ, ಎಲೆಕ್ಟ್ರಾನಿಕ್ ಉತ್ಪಾದನಾ ವಲಯಗಳೂ (ಇಎಂಸಿ) 2.0 ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳು ಮತ್ತು ಅರೆವಾಹಕಗಳ ಉತ್ಪಾದನೆಯನ್ನು ಪ್ರೋತ್ಸಾಹಿಸುವ ಯೋಜನೆಗಳನ್ನು ಸರ್ಕಾರ ಘೋಷಿಸಿದೆ.
ಇವುಗಳು ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ವಿಸ್ತರಿಸಿ, ದೇಶೀಯ ಮೌಲ್ಯವರ್ಧನೆಯನ್ನು ಹೆಚ್ಚಿಸಿ, ಹೆಚ್ಚಿನ ಉದ್ಯೋಗ ಒದಗಿಸುವ ಮತ್ತು ವಿಶ್ವಾಸಾರ್ಹ ಮೌಲ್ಯದ ಸರಣಿಯನ್ನು ನಿರ್ಮಿಸುವ ಗುರಿ ಹೊಂದಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


