ದೆಹಲಿ ದಂಗೆ: ಅಮಾನತುಗೊಂಡ ಆಪ್ ಕೌನ್ಸಿಲರ್ ಸೇರಿ 14 ಮಂದಿ ವಿರುದ್ಧ ಚಾರ್ಜ್ ಶೀಟ್ ದಾಖಲು
ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡ ಕೌನ್ಸಿಲರ್ ತಹೀರ್ ಹುಸೇನ್ ಸೇರಿದಂತೆ 14 ಮಂದಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಚ್ ಶೀಟ್ ದಾಖಲಿಸಿದ್ದಾರೆ.

ನವದೆಹಲಿ: ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಅಮಾನತುಗೊಂಡ ಕೌನ್ಸಿಲರ್ ತಹೀರ್ ಹುಸೇನ್ ಸೇರಿದಂತೆ 14 ಮಂದಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ.
ದೆಹಲಿ ಪೊಲೀಸರು ಇಂದು 1,030 ಪುಟಗಳ ಚಾರ್ಚ್ ಶೀಟ್ ಅನ್ನು ಕಾರ್ಕಾರ್ಡೂಮಾ ಕೋರ್ಟ್ ಗೆ ಸಲ್ಲಿಸಿದ್ದು, ಚಾಂದ್ ಬಾಗ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹುಸೇನ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿದೆ. ಅಲ್ಲದೆ ಹುಸೇನ್ ಅವರು ಹಿಂಸಾಚಾರಕ್ಕಾಗಿ ಸುಮಾರು 1.30 ಕೋಟಿ ರೂ. ವೆಚ್ಚ ಮಾಡಿದ್ದಾರೆ ಎಂದೂ ದೂರಲಾಗಿದೆ. ಈ ಸಂಬಂಧ ತಾಹೀರ್ ಹುಸೇನ್ ಅವರ ಸಹೋದರ ಮತ್ತು ಇತರ 15 ಮಂದಿಯನ್ನು ಸಹ ಆರೋಪಿಗಳನ್ನಾಗಿ ಮಾಡಲಾಗಿದೆ.
ಜೂನ್ 16ರಂದು ಕೋರ್ಟ್ ಈ ಚಾರ್ಜ್ ಶೀಟ್ ಅನ್ನು ಪರಿಶೀಲಿಸಲಿದೆ.
ಹುಸೇನ್ ಅವರು ಚಾಂದ್ ಬಾಗ್ ನಲ್ಲಿ ಹಿಂಸಾಚಾರ ನಡೆಯುವ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ಹಾಗೂ ಇತರರನ್ನು ಭೇಟಿ ಮಾಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


