ಆಂಧ್ರಪ್ರದೇಶ: ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲಿದೆ ಐಬಿಎಂ ವ್ಯಾಟ್ಸನ್ ಚಾಟ್‌ಬಾಟ್!
ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲು ಆಂಧ್ರಪ್ರದೇಶ ಸರ್ಕಾರ ಐಬಿಎಂ ವ್ಯಾಟ್ಸನ್ ಚಾಟ್ ಬಾಟ್ ನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಅಮರಾವತಿ: ಕೋವಿಡ್-19 ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಲು ಆಂಧ್ರಪ್ರದೇಶ ಸರ್ಕಾರ ಐಬಿಎಂ ವ್ಯಾಟ್ಸನ್ ಚಾಟ್ ಬಾಟ್ ನ್ನು ಬಳಕೆ ಮಾಡಿಕೊಳ್ಳುತ್ತಿದೆ.
ಆಂಧ್ರಪ್ರದೇಶದ ರಾಷ್ಟ್ರೀಯ ಹೆಲ್ತ್ ಮಿಷನ್ ಪೋರ್ಟಲ್ ನಲ್ಲಿ ಜನಸಾಮಾನ್ಯರು ಕೋವಿಡ್-19ಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಬಹುದಾಗಿದೆ. ಇದಕ್ಕೆ ವ್ಯಾಟ್ಸನ್ ಎಂಬ ಚಾಟ್ ಬಾಟ್ ಉತ್ತರಿಸಲಿದೆ.
ಐಬಿಎಂ ಸಹಕಾರದಿಂದ ಈ ವಿನೂತನ ಕ್ರಮವನ್ನು ಆಂಧ್ರಪ್ರದೇಶ ಸರ್ಕಾರ ಅಳವಡಿಸಿಕೊಂಡಿದೆ. ಈ ಬಗ್ಗೆ ಮಾತನಾಡಿರುವ, ರಾಷ್ಟ್ರೀಯ ಆರೋಗ್ಯ ಮಿಷನ್ ನ ನಿರ್ದೇಶಕ ಹಾಗೂ ಆರೋಗ್ಯ, ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಭಾಸ್ಕರ್ " ಚಾಟ್ ಬಾಟ್ ಇಂಗ್ಲೀಷ್, ತೆಲುಗು, ಹಿಂದಿ ಭಾಷೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದೆ, ಇದನ್ನು ಇಷ್ಟು ವೇಗವಾಗಿ ಸಾಧ್ಯವಾಗಿಸಿದ ಐಬಿಎಂ ಅಭಿನಂದನಾರ್ಹ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


