ದೇಶ

ರಕ್ಷಣಾ ಕಾರ್ಯದರ್ಶಿಗೂ ಒಕ್ಕರಿಸಿದ ಕೊರೋನಾ ಸೋಂಕು; ಮೂಲ ಪತ್ತೆಗೆ ಸಚಿವಾಲಯದ ಹರಸಾಹಸ

ದೇಶಾದ್ಯಂತ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇದೀಗ ಕೇಂದ್ರ ರಕ್ಷಣಾ ಕಾರ್ಯದರ್ಶಿಗಳಿಗೂ ಮಾರಕ ವೈರಸ್ ಒಕ್ಕರಿಸಿದೆ.

ರಕ್ಷಣಾ ಕಾರ್ಯದರ್ಶಿಗೂ ಒಕ್ಕರಿಸಿದ ಕೊರೋನಾ ಸೋಂಕು; ಮೂಲ ಪತ್ತೆಗೆ ಸಚಿವಾಲಯದ ಹರಸಾಹಸ
ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್
Published On :

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇದೀಗ ಕೇಂದ್ರ ರಕ್ಷಣಾ ಕಾರ್ಯದರ್ಶಿಗಳಿಗೂ ಮಾರಕ ವೈರಸ್ ಒಕ್ಕರಿಸಿದೆ.

ಹೌದು.. ಭಾರತೀಯ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೂ ಕೊರೋನಾ ಸೋಂಕು ತಗುಲಿರುವುದು ಬುಧವಾರ ಖಚಿತವಾಗಿದೆ. ಮೂಲಗಳ ಪ್ರಕಾರ ಸೋಂಕು ಪೀಡಿತ ಅಜಯ್ ಕುಮಾರ್ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು ಅಲ್ಲಿಯೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಸೂಕ್ತರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ.

ಸೋಂಕಿನ ಮೂಲ ಪತ್ತೆ ಮಾಡಲು ಅಧಿಕಾರಿಗಳ ಹರಸಾಹಸ
ಸಾಕಷ್ಟು ಮುಂಜಾಗ್ರತೆ ಹೊರತಾಗಿಯೂ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೆ ಸೋಂಕು ಹೇಗೆ ತಗುಲಿತು ಎಂಬುದು ಅಧಿಕಾರಿಗಳಿಗೇ ಯಕ್ಷ ಪ್ರಶ್ನೆಯಾಗಿದ್ದು, ಸೋಂಕು ಸಂಪರ್ಕದ ಮೂಲ ಪತ್ತೆಹಚ್ಚಲು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಅಂತೆಯೇ ರೈಸೀನಾ ಹಿಲ್ಸ್ ಸೌತ್ ಬ್ಲಾಕ್‍ನಲ್ಲಿರುವ ರಕ್ಷಣಾ ಸಚಿವಾಲಯದ ಕೇಂದ್ರ ಕಚೇರಿಯಲ್ಲಿ ಕನಿಷ್ಟ 35 ಜನ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಅಜಯ್ ಕುಮಾರ್ ಅವರಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಎಲ್ಲರನ್ನೂ ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ. 

ಇದೇ ಕಚೇರಿಯ ಮೊದಲನೇ ಮಹಡಿಯಲ್ಲಿ ರಕ್ಷಣಾ ಸಚಿವರು, ರಕ್ಷಣಾ ಕಾರ್ಯದರ್ಶಿ, ಸೇನೆ ಮುಖ್ಯಸ್ಥ ಹಾಗೂ ನೌಕಾಪಡೆಯ ಮುಖ್ಯಸ್ಥರ ಕಚೇರಿಗಳು ಇವೆ.  ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಚೇರಿಗೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ. ಜನರ ಸಂಪರ್ಕ- ಪತ್ತೆಹಚ್ಚುವುದು, ಸಂಪರ್ಕ ತಡೆಯ ಕುರಿತ ಎಲ್ಲ ನಿಯಮಗಳನ್ನು ಸೂಕ್ಷ್ಮವಾಗಿ ಅನುಸರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.