ದೇಶ

ಗುಜರಾತ್ ಕಾಂಗ್ರೆಸ್ ಗೆ ಮತ್ತೆ ಆಘಾತ: ಇನ್ನೊಬ್ಬ ಶಾಸಕ ರಾಜೀನಾಮೆ

ಜೂನ್ 19ರ ರಾಜ್ಯಸಭೆ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಬುದವಾರವಷ್ಟೇ ಇಬ್ಬರು ಕೈ ಶಾಸಕರು ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆಸ್ ಶಾಸಕ ಬ್ರಿಜೇಶ್ ಮೆರ್ಜಾ ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುಜರಾತ್ ಕಾಂಗ್ರೆಸ್ ಗೆ ಮತ್ತೆ ಆಘಾತ: ಇನ್ನೊಬ್ಬ ಶಾಸಕ ರಾಜೀನಾಮೆ
ಕಾಂಗ್ರೆಸ್
Published On :

ಗಾಂಧಿನಗರ: ಜೂನ್ 19ರ ರಾಜ್ಯಸಭೆ ಚುನಾವಣೆಗೆ ಮುನ್ನ ಗುಜರಾತ್ ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದೆ. ಬುದವಾರವಷ್ಟೇ ಇಬ್ಬರು ಕೈ ಶಾಸಕರು ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆಸ್ ಶಾಸಕ ಬ್ರಿಜೇಶ್ ಮೆರ್ಜಾ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೊರ್ಬಿ ಸ್ಥಾನದಿಂದ ಆಯ್ಕೆಯಾದ ಮೆರ್ಜಾ ಅವರ ರಾಜೀನಾಮೆಯನ್ನು ಸ್ಪೀಕರ್ ರಾಜೇಂದ್ರ ತ್ರಿವೇದಿ ಅಂಗೀಕರಿಸಿದ್ದಾರೆ ಎಂದು ವಿಧಾನಸಭಾ ಕಾರ್ಯದರ್ಶಿ ಖಾತ್ರಿಪಡಿಸಿದರು.

ಮೆರ್ಜಾ ಕಳೆದ ಮೂರು ದಿನಗಳಲ್ಲಿ ರಾಜೀನಾಮೆ ಸಲ್ಲಿಸಿರುವ  ಮೂರನೇ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇಷ್ಟು ಮಾತ್ರವಲ್ಲದೆ ಮೆರ್ಜಾ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮುನ್ನ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

ಬುಧವಾರ ಸಂಜೆ ಕಾಂಗ್ರೆಸ್ ನ ಶಾಸಕರಾಗಿದ್ದ ಅಕ್ಷಯ್ ಪಟೇಲ್ ಮತ್ತು ಜಿತು ಚೌಧರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರೆಂದು ಸ್ಪೀಕರ್ ತ್ರಿವೇದಿ ಗುರುವಾರ ಪ್ರಕಟಿಸಿದ್ದರು.

ಕಳೆದ ಮಾರ್ಚಿನಿಂದೀಚೆಗೆ ಗುಜಾರಾತಿನ ಎಂಟು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಇದು ಕೈ ಪಕ್ಷಕ್ಕೆ ಗುಜರಾತಿನಲ್ಲಿ ತೀವ್ರ ಹಿನ್ನೆಡೆ ತಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.