ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು-ವರದಿ, 'ಇಲ್ಲ' ಎನ್ನುತ್ತಿದ್ದಾನೆ ಆತನ ಸಹೋದರ!
ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ ಹಾಗೂ ಆತನ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕರಾಚಿ: ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂ ಹಾಗೂ ಆತನ ಪತ್ನಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎನ್ನುತ್ತಿವೆ ಸುದ್ದಿ ವಾಹಿನಿಗಳ ವರದಿಗಳು.
ಆದರೆ ಈ ಬಗ್ಗೆ ಡಿ-ಕಂಪನಿ ನಿರ್ವಹಣೆ ಮಾಡುತ್ತಿರುವ ದಾವೂದ್ ಇಬ್ರಾಹಿಂ ನ ಸಹೋದರ ಅನೀಸ್ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದು, ದಾವೂದ್ ಇಬ್ರಾಹಿಂ ಗೆ ಕೊರೋನಾ ಸೋಂಕು ತಗುಲಿಲ್ಲ ಎಂದು ಹೇಳುತ್ತಿದ್ದಾನೆ. ಸುದ್ದಿ ಸಂಸ್ಥೆ ಐಎಎನ್ಎಸ್ ಜೊತೆಗೆ ಮಾತನಾಡಿರುವ ಅನೀಸ್ ಇಬ್ರಾಹಿಂ, ತನ್ನ ಸಹೋದರನಿಗೆ ಕೊರೋನಾ ಸೋಂಕು ತಗುಲಿದೆ ಎಂಬ ವರದಿಗಳನ್ನು ನಿರಾಕರಿಸಿದ್ದಾನೆ. ಅಷ್ಟೇ ಅಲ್ಲದೇ ಪಾಕಿಸ್ತಾನ, ಯುಎಇಗಳಲ್ಲಿ ಡಿ-ಕಂಪನಿ ಉದ್ಯಮ ನಡೆಸುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ
ಗುಪ್ತಚರ ಮಾಹಿತಿಯ ಪ್ರಕಾರವೂ ದಾವೂದ್ ಇಬ್ರಾಹಿಂಗೆ ಕೊರೋನಾ ಸೋಂಕು ತಗುಲಿದ್ದು ಆತನ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 1993ರ ಬಾಂಬೆ ಸ್ಫೋಟ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾವೂದ್ ಇಬ್ರಾಹಿಂ ಭಾರತಕ್ಕೆ ಬೇಕಾಗಿದ್ದು ಆತನ ವಿರುದ್ಧ ಇಂಟರ್ ಪೋಲ್ ನೊಟೀಸ್ ಜಾರಿಗೊಂಡಿದೆ.
ಕರಾಚಿಯ ಮಿಲಿಟರಿ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂಗೆ ಚಿಕಿತ್ಸೆ ಲಭ್ಯವಾಗುತ್ತಿದೆ ಎಂಬ ಮಾಹಿತಿ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


