ತಮಿಳುನಾಡು: ಗಂಡು ಮಗುವಾಗಲಿಲ್ಲ ಎಂದು ಮೂರು ತಿಂಗಳ ಹೆಣ್ಣು ಮಗುವನ್ನು ಕೊಂದು ತಾಯಿ ಆತ್ಮಹತ್ಯೆ
ಮೂರು ತಿಂಗಳ ಹೆಣ್ಣು ಮಗವನ್ನು ಕೊಂದು 34 ವರ್ಷದ ಮಹಿಳೆ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಈರೋಡ್: ಮೂರು ತಿಂಗಳ ಹೆಣ್ಣು ಮಗವನ್ನು ಕೊಂದು 34 ವರ್ಷದ ಮಹಿಳೆ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಮೂಂಗಿಲಪಾಳ್ಯಂ ನಿವಾಸಿ ಸಂಗೀತಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಈಕೆಗೆ ಈಗಾಗಲೇ 9 ವರ್ಷದ ಹೆಣ್ಣು ಮಗುವಿದೆ, ಮತ್ತೊಂದು ಮಗುವಿಗೆ ಗರ್ಭಿಣಿಯಾಗಿದ್ದ ಆಕೆ, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದಳು, ಆದರೆ ಮತ್ತೆ ಹೆಣ್ಣು ಮಗು ಜನಿಸಿದ ಕಾರಣ ಆಕೆ ಬೇಸರಗೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಕೆಟ್ ನೀರಿನಲ್ಲಿ ಮಗುವನ್ನು ಮುಳುಗಿಸಿ ಕೊಂದ ಸಂಗೀತಾ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಆಕೆ ಪತಿ ಗುಣಶೇಖರ್ ಮನೆಯಿಂದ ಹೊರ ತೆರಳಿದ್ದ, ಅತ್ತೆ ದೊಡ್ಡ ಮೊಮ್ಮಗಳ ಜೊತೆ ಪಕ್ಕದ ಮನೆಗೆ ಹೋಗಿದ್ದರು. ನಂತರ ಮನೆಗೆ ಬಂದ ಪತಿ ಪೊಲೀಸರಿಗೆ ವಿಷಯ ತಿಳಿಸಿದ್ದಾನೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


