ಕಾಂಗ್ರೆಸ್ ನಲ್ಲಿ ನಿರ್ಲಕ್ಷ್ಯ: ನವಜೋತ್ ಸಿಧು ಎಎಪಿ ಸೇರ್ಪಡೆಗೆ ಪ್ರಶಾಂತ್ ಕಿಶೋರ್ ಮಧ್ಯಸ್ಥಿಕೆ?
ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬಂತಹ ಮಾತುಗಳು ಹರಿದಾಡುತ್ತಿವೆ.

ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬಂತಹ ಮಾತುಗಳು ಹರಿದಾಡುತ್ತಿವೆ.
ಆದರೆ, ಇಂತಹ ಹೇಳಿಕೆಗಳನ್ನು ಅಲ್ಲಗಳೆದಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಅವರೊಡನೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.
ನವಜೋತ್ ಸಿಧು, ಅರವಿಂದ್ ಕೇಜ್ರಿವಾಲ್ ಹಾಗೂ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದಾರೆ ಎಂದು ನಂಬಲಾಗಿರುವ ವ್ಯಕ್ತಿಯೊಂದಿಗೆ ಇದನ್ನು ಖಚಿತಪಡಿಸಿಕೊಂಡಿರುವುದಾಗಿ ಅಮರೀಂದರ್ ಸಿಂಗ್ ತಿಳಿಸಿದ್ದಾರೆ.
ನವಜೋತ್ ಸಿಧು ಪಕ್ಷದ ಒಂದು ಭಾಗವಾಗಿದ್ದಾರೆ. ಸಿಧು ಅವರನ್ನು ಎಎಪಿಗೆ ಸೇರುವಂತೆ ಪ್ರಶಾಂತ್ ಕಿಶೋರ್ ಪ್ರಚೋದಿಸಿದ್ದಾರೆ ಎಂಬುದು ನಿಜವಲ್ಲ, ಪ್ರಶಾಂತ್ ಕಿಶೋರ್ ಅವರೇ ಇದನ್ನು ತಮಗೆ ತಿಳಿಸಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ತಿಳಿಸಿದ್ದಾರೆ.
2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವುನಲ್ಲಿ ಕಿಶೋರ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ನಾವಿಬ್ಬರು ಸ್ನೇಹಿತರೂ, ನಮ್ಮ ಶಾಸಕರು ಚುನಾವಣೆ ಕಾರ್ಯತಂತ್ರ ಕುರಿತಂತೆ ಅವರ ಬಳಿ ಸಲಹೆ ಪಡೆಯುತ್ತಾರೆ. ಸಂತೋಷದಿಂದ ಬಂದು ಸಹಾಯ ಮಾಡುವುದಾಗಿ ಕಿಶೋರ್ ಹೇಳಿದ್ದಾರೆ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಒಂದು ವರ್ಷದಿಂದಲೂ ಕಾಂಗ್ರೆಸ್ ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ಸಿಧು, ಇತ್ತೀಚಿಗೆ ಕಾಂಗ್ರೆಸ್ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ, ಎಎಪಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬಂತಹ ಊಹಾಪೋಹಗಳು ಹರಿದಾಡುತ್ತಿವೆ. ಸಿಧು ಎಎಪಿ ಸೇರುವಂತೆ ಪ್ರಶಾಂತ್ ಕಿಶೋರ್ ಪ್ರೇರೆಪಿಸಿದ್ದಾರೆ ಎಂಬಂತಹ ವರದಿಗಳು ತಿಳಿಸಿವೆ. ಮತ್ತೊಂದೆಡೆ ಸಿಧು ಎಎಪಿಗೆ ಬರುವುದಾದರೆ ಸ್ವಾಗತಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
2016ರಲ್ಲಿ ಬಿಜೆಪಿ ತೊರೆದು ಸಿಧು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹಾಗೂ ಸಿಧು ನಡುವಿನ ಮನಸ್ತಾಪದ ಕಾರಣದಿಂದಾಗಿ ಕಳೆದ ವರ್ಷ ಸಚಿವ ಸ್ಥಾನವನ್ನು ಕೂಡಾ ಕಳೆದುಕೊಳ್ಳಬೇಕಾಯಿತು. ಖ್ಯಾತ ಕ್ರಿಕೆಟ್ ನಿರೂಪಕರಾಗಿರುವ ಸಿಧು ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ಹೆಸರಿಸಲ್ಪಟ್ಟಿದ್ದರೂ ಸಹ ಹರಿಯಾಣ ಮತ್ತು ದೆಹಲಿಯಲ್ಲಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


