ದೇಶ

ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ: 3 ಉಗ್ರರು ಅಡಗಿ ಕುಳಿತಿರುವ ಶಂಕೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಸ್ಥಳದಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ.

ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ: 3 ಉಗ್ರರು ಅಡಗಿ ಕುಳಿತಿರುವ ಶಂಕೆ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಸ್ಥಳದಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ.

ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ರೈಫಲ್ಸ್, ಸಿಆರ್'ಪಿಎಫ್ ಮತ್ತು ವಿಶೇಷ ಕಾರ್ಯಾಚರಣೆ ತಂಡ ಇಂದು ಬೆಳಿಗ್ಗೆ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. 

ಭದ್ರತಾ ಪಡೆಗಳು ಹಳ್ಳಿಯ ಒಂದು ನಿರ್ದಿಷ್ಟ ಪ್ರದೇಶದ ಕಡೆಗೆ ಸಾಗುತ್ತಿದ್ದಾಗ ಅಡಗಿ ಕುಳಿತಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದಾಗ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಇಬ್ಬರು ಇಲ್ಲವೇ ಮೂವರು ಅಡಗಿರುವ ಶಂಕೆ ಇದೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಈ ವರೆಗೂ ಯಾವುದೇ ಸಾವು ನೋವುಗಳಾಗಿರುವ ವರದಿಗಳಾಗಿಲ್ಲ. ಪ್ರಸ್ತುತ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳಿಂತ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.