ದೇಶ

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಭಾರತೀಯ ಸೇನಾಪಡೆಗಳ ಗುಂಡಿಗೆ ನಾಲ್ವರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ 9 ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: ಭಾರತೀಯ ಸೇನಾಪಡೆಗಳ ಗುಂಡಿಗೆ ನಾಲ್ವರು ಉಗ್ರರು ಹತ
ಸಂಗ್ರಹ ಚಿತ್ರ
Published On :

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾಪಡೆ ಸೋಮವಾರ ಮತ್ತೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ 9 ಮಂದಿ ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನಾಪಡೆ ಯಶಸ್ವಿಯಾಗಿದೆ. 

ಶೋಪಿಯಾನ್ ಜಿಲ್ಲೆಯ ಪಿಂಜೋರಾ ಎಂಬ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆಸಲಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. 

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿಯುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದು, ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಸೇನಾಪಡೆ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

ಭಾನುವಾರ ಕೂಡ ಶೋಪಿಯಾನ್ ಜಿಲ್ಲೆ ರೆಬಾನ್ ಎಂಬ ಪ್ರದೇಶದಲ್ಲಿ ಎನ್'ಕೌಂಟರ್ ನಡೆಸಿದ್ದ ಸೇನಾಪಡೆ ಐವರು ಉಗ್ರರನ್ನು ಹತ್ಯೆ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.