ಮೊನಿಕಾ ಕಪಿಲ್ ಮೊಹ್ತಾ ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ನೇಮಕ
ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಮೊನಿಕಾ ಕಪಿಲ್ ಮೊಹ್ತಾ ನೇಮಕಗೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಈ ವಿಷಯವನ್ನು ಪ್ರಕಟಿಸಿದೆ.

ನವದೆಹಲಿ: ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಮೊನಿಕಾ ಕಪಿಲ್ ಮೊಹ್ತಾ ನೇಮಕಗೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಈ ವಿಷಯವನ್ನು ಪ್ರಕಟಿಸಿದೆ.
ಭಾರತೀಯ ವಿದೇಶಾಂಗ ಸೇವೆಯ 1985ರ ಬ್ಯಾಚಿನ ಅಧಿಕಾರಿಯಾಗಿರುವ ಮೊನಿಕಾ ಪ್ರಸ್ತುತ ಸ್ವಿಡನ್ ದೇಶದ ಭಾರತೀಯ ರಾಯಭಾರಿಯಾಗಿದ್ದಾರೆ. ಶೀಘ್ರದಲ್ಲಿಯೇ ಅವರು ಸ್ವಿಟ್ಜರ್ಲೆಂಡ್ ನ ಭಾರತದ ಮುಂದಿನ ರಾಯಭಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಮೊನಿಕಾ ಜುಲೈ 2011ರಿಂದ ಜನವರಿ 2015ರವರೆಗೂ ಪೋಲ್ಯಾಂಡ್ ಮತ್ತು ಲಿಥುವೇನಿಯಾದ ಭಾರತದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ನೆಹರು ಕೇಂದ್ರದ ನಿರ್ದೇಶಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಪಾಕಿಸ್ತಾನ, ಗಲ್ಫ್, ವಿಶ್ವಸಂಸ್ಥೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಫ್ರಾನ್ಸ್, ನೇಪಾಳ, ಥೈಲ್ಯಾಂಡ್ ದೇಶಗಳ ಭಾರತೀಯ ರಾಯಭಾರಿ ಕಚೇರಿಯಲ್ಲಿಯೂ ಮೊನಿಕಾ ಕಾರ್ಯನಿರ್ವಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


