ಡಿಎಂಕೆ ಶಾಸಕನಿಗೆ ಕೊರೋನಾ ಸೋಂಕು: ಆರೋಗ್ಯ ಸ್ಥಿತಿ ಗಂಭೀರ
ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಶಾಸಕ ಜೆ ಅನ್ಬಳಗನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿವೆ.

ಚೆನ್ನೈ:ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಶಾಸಕ ಜೆ ಅನ್ಬಳಗನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ತಿಳಿಸಿವೆ.
61 ವರ್ಷದ ಶಾಸಕರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಮ್ಲಜನಕದ ಪ್ರಮಾಣ ಅರ್ಧಕ್ಕೆ ಇಳಿದಿದ್ದು, ಎಂದು ಡಾ.ರೆಲಾ ಸಂಸ್ಥೆ ಮತ್ತು ವೈದ್ಯಕೀಯ ಕೇಂದ್ರ ತಿಳಿಸಿದೆ.
ಇಂದು ಸಂಜೆವರೆಗೊ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ, ಜೊತೆಗೆ ಅವರ ಹೃದಯದ ಆರೋಗ್ಯ ಕೂಡ ಸರಿಯಿಲ್ಲ, ರಕ್ತದೊತ್ತಡ ಸಮ ಪ್ರಮಾಣದಲ್ಲಿ ಸರಿದೂಗಿಸಲು ಮೆಡಿಸಿನ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ಅವರಿಗೆ ಕಿಡ್ನಿ ಸಮಸ್ಯೆ ಕೂಡ ಇದೇ ಸಮಯದಲ್ಲಿ ಹೆಚ್ಚಾಗಿದೆ. ಪೂರ್ಣ ಪ್ರಮಾಣದಲ್ಲಿ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಆಸ್ಪತ್ರೆ ಸಿಇಓ ವಿವರಿಸಿದ್ದಾರೆ.
ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಅನ್ಬಳಗನ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


