ದೇಶ

20 ವರ್ಷದ ಗರ್ಭಿಣಿ ಪುತ್ರಿ ಕೊಲೆ: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆ ಶಂಕೆ!

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಗರ್ಭಿಣಿಯಾಗಿದ್ದ 20 ವರ್ಷದ ಪುತ್ರಿಯನ್ನು ಪೋಷಕರೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

20 ವರ್ಷದ ಗರ್ಭಿಣಿ ಪುತ್ರಿ ಕೊಲೆ: ತೆಲಂಗಾಣದಲ್ಲಿ ಮರ್ಯಾದಾ ಹತ್ಯೆ ಶಂಕೆ!
ಸಾಂದರ್ಭಿಕ ಚಿತ್ರ
Published On :

ಹೈದರಾಬಾದ್:  ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಗರ್ಭಿಣಿಯಾಗಿದ್ದ 20 ವರ್ಷದ ಪುತ್ರಿಯನ್ನು ಪೋಷಕರೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಗರ್ಭಿಣಿಯಾಗಿದ್ದ ಆಕೆ ಗರ್ಭಪಾತ ಮಾಡಿಸಿಕೊಳ್ಳಲು ನಿರಾಕರಿಸಿದ ಕಾರಣ ಆಕೆಯನ್ನು ಮಾರ್ಯಾದಾ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜೂನ್ 7 ರಂದು ಆಕೆ ಮಲಗಿದ್ದಾಗ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಗಾದ್ವಾಲ ಜಿಲ್ಲೆಯ  ಕಾಲುಕುಂಟ್ಲಾ ಗ್ರಾಮದಲ್ಲಿ ಆಕೆ ಸಾವನ್ನಪ್ಪಿದ್ದಳು, ಅದು ಸ್ವಾಭಾವಿಕ ಸಾವು  ಹೃದಯಾಘಾತ ದಿಂದ ಮೃತಪಟ್ಟಿದ್ದಾಳೆ ಎಂದು ಹೇಳಿದ್ದರು.

ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಅನುಮಾನ ಬಂದು ಮಾಹಿತಿ ಪಡೆದಾಗ ಆಕೆ ಕಾಲೇಜು ವಿದ್ಯಾರ್ಥಿಯಾಗಿದ್ದು, ಯುವಕನನ್ನು ಪ್ರೀತಿಸಿ ಗರ್ಭಿಣಿಯಾಗಿದ್ದಳು, ಪ್ರಿಯಕರನ ಜೊತೆ ಓಡಿ ಹೋಗುವ ಭಯದಿಂದ ಪೋಷಕರು ಆಕೆಗೆ ಗರ್ಭಪಾತ ಮಾಡಿಸುವಂತೆ ಹೇಳಿದ್ದರು, ಆಕೆ ಅದಕ್ಕೆ ಒಪ್ಪದಿದ್ದಾಗ ಆಕೆಯನ್ನು ಕೊಲ್ಲಲಾಗಿದೆ ಎಂದು ಶಂಕಿಸಲಾಗಿದೆ.

ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆ ವರದಿ ನಂತರ ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಆರೋಪದ ಮೇಲೆ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಪೋಷಕರು ತಾವು ಮಗಳನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.