ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಾಸ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣಾಸ್ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬನನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯಾದ ಆ ನತದೃಷ್ಟ ವ್ಯಕ್ತಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುಖಂಡ 56 ವರ್ಷದ ಆಮಿರ್ ಅಲಿ ಖಾನ್ ಎಂದು ಗುರುತಿಸಲಾಗಿದ್ದು, ಈತನ ಮೇಲೆ ಸಶಸ್ತ್ರ ಧಾರಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದಾರೆ, ನಂತರ ಜಿಲ್ಲೆಯ ಬಸಂತಿ ಪೊಲೀಸ್ ಠಾಣೆ ವ್ಯಾಪ್ತಿಯ ಫೂಲ್ ಮಲಂಚೊದಲ್ಲಿ ಅವರನ್ನು ಗುಂಡಿಕ್ಕಿ ಸಾಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ದುಷ್ಕರ್ಮಿಗಳು ಕಚ್ಚಾ ಬಾಂಬ್ ಎಸೆದ ಪರಿಣಾಮ ಸ್ಥಳದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕೆಲ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


