ದೇಶದಲ್ಲಿ ಕೊರೋನಾ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ: ಕೇಂದ್ರ ಸರ್ಕಾರ
ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ತಲುಪಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಧಾನ ನಿರ್ದೇಶಕ ಬಲರಾಮ್ ಭಾರ್ಗವ್ ಅವರು, ದೆಹಲಿ ಮತ್ತು ಮುಂಬೈನಲ್ಲಿ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ದೇಶದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ತಲುಪಿಲ್ಲ. ಇದರ ಸುತ್ತ ಕಾವೇರಿದ ಚರ್ಚೆ ನಡೆಯುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ವ್ಯಾಖ್ಯಾನಿಸಿಲ್ಲ. ಸೋಂಕು ಹರಡುವಿಕೆ ನಮ್ಮ ದೇಶದಲ್ಲಿ ತುಂಬಾ ಕಡಿಮೆ, ಶೇ. 1ಕ್ಕಿಂತ ಕಡಿಮೆ ಇದೆ. ನಗರ ಪ್ರದೇಶಗಳಲ್ಲಿ ಇದು ಸ್ವಲ್ಪ ಹೆಚ್ಚು ಹಾಗೂ ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಸ್ವಲ್ಪ ಹೆಚ್ಚಾಗಿದೆ. ಖಂಡಿತವಾಗಿಯೂ ನಾವು ಸಮುದಾಯ ಪ್ರಸರಣ ಹಂತದಲ್ಲಿ ಇಲ್ಲ ಎಂದು ಹೇಳಿದ್ದಾರೆ.
ತಜ್ಞರ ಪ್ರಕಾರ ಸೋಂಕು ಪ್ರಕರಣಗಳ ಮೂಲ ಪತ್ತೆಯಾಗದೇ ಇರುವ ಪ್ರಕರಣಗಳು ಹೆಚ್ಚಾದಾಗ ಅದನ್ನು ಸಮುದಾಯ ಪ್ರಸರಣ ಅಥವಾ ಮೂರನೇ ಹಂತ ಎನ್ನಲಾಗುತ್ತದೆ. ಕರ್ನಾಟಕವೂ ಸೇರಿ ದೇಶದೆಲ್ಲೆಡೆ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮುಂಬೈ ಮತ್ತು ದೆಹಲಿಯಲ್ಲಿ ಈ ಪ್ರಮಾಣ ವಿಪರೀತ ಏರಿಕೆಯಾಗಿದೆ. ಸೋಮವಾರ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೆಚ್ಚಿನ ಪ್ರಮಾಣದ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆಯಾಗುತ್ತಿಲ್ಲ. ಆದರೆ ಕೇಂದ್ರ ಸರ್ಕಾರ ಮಾತ್ರ ಸಮುದಾಯ ಪ್ರಸರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದರು. ಸತ್ಯೇಂದ್ರ ಜೈನ್ ಪ್ರಕಾರ ದೆಹಲಿಯ ಶೇ.50 ರಷ್ಟು ಪ್ರಕರಣಗಳಲ್ಲಿ ಸೋಂಕಿನ ಮೂಲ ತಿಳಿದು ಬರುತ್ತಿಲ್ಲ. 'ದೆಹಲಿಯಲ್ಲಿ ಸಮುದಾಯ ಪ್ರಸರಣ ಆರಂಭವಾಗಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ ಎಂಬುದಾಗಿ ಜೈನ್ ಪ್ರತಿಪಾದಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


