ಲಷ್ಕರ್ ಎ ತೊಯ್ಬಾ ಜಾಲ ಪತ್ತೆ: 100 ಕೋಟಿ ಮೌಲ್ಯದ ಅಫೀಮು, 1.34 ಕೋಟಿ ಕರೆನ್ಸಿ ವಶ!
ಉತ್ತರ ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜಾಲವನ್ನು ಪತ್ತೆ ಮಾಡಿ, ಅವರಿಂದ ಅಫೀಮು ಮತ್ತು ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಂಡಿವೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಶ್ರೀನಗರ: ಉತ್ತರ ಕಾಶ್ಮೀರದ ಗಡಿ ಜಿಲ್ಲೆಯಾದ ಕುಪ್ವಾರಾದಲ್ಲಿ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಜಾಲವನ್ನು ಪತ್ತೆ ಮಾಡಿ, ಅವರಿಂದ ಅಫೀಮು ಮತ್ತು ಭಾರತೀಯ ಕರೆನ್ಸಿಯನ್ನು ವಶಪಡಿಸಿಕೊಂಡಿವೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.
ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ನ ವಿಶೇಷ ತಂಡ ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಕಣಿವೆಯಲ್ಲಿ ಮಾದಕ ವಸ್ತು ಪೂರೈಕೆ ಮತ್ತು ಹಿಂಸಾಚಾರಗಳಲ್ಲಿ ಭಾಗಿಯಾಗಿದ್ದ ಮೂವರು ಎಲ್‌ಇಟಿ ಉಗ್ರರನ್ನು ಬಂಧಿಸಿವೆ ಎಂದು ಅವರು ತಿಳಿಸಿದ್ದಾರೆ.
ಲಷ್ಕರ್ ಜಾಲದ ಸದಸ್ಯರು ಪಾಕಿಸ್ತಾನದಲ್ಲಿರುವ ಸಂಘಟನೆಯ ಹಿರಿಯ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು. ಈ ಕುರಿತಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


