ದೇಶ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ; ಸಮುದಾಯ ಹಂತ ತಲುಪಿಲ್ಲ: ಐಸಿಎಂಆರ್

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86ಕ್ಕೆ ಲಕ್ಷಕ್ಕೆ ಏರಿಕೆಯಾಗಿದ್ದು, 8 ಸಾವಿರದ 102 ಮಂದಿ ಸಾವನ್ನಪ್ಪಿದ್ದಾರೆ. ಆದರೂ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ -ಐಸಿಎಂಆರ್ ಪುನರುಚ್ಚರಿಸಿದೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86 ಲಕ್ಷಕ್ಕೆ ಏರಿಕೆ; ಸಮುದಾಯ ಹಂತ ತಲುಪಿಲ್ಲ: ಐಸಿಎಂಆರ್
ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2.86ಕ್ಕೆ ಲಕ್ಷಕ್ಕೆ ಏರಿಕೆಯಾಗಿದ್ದು, 8 ಸಾವಿರದ 102 ಮಂದಿ ಸಾವನ್ನಪ್ಪಿದ್ದಾರೆ. ಆದರೂ ಸೋಂಕು ಸಮುದಾಯ ಹಂತ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ -ಐಸಿಎಂಆರ್ ಪುನರುಚ್ಚರಿಸಿದೆ.

ಭಾರತದಂತಹ ದೊಡ್ಡ ದೇಶದಲ್ಲಿ ಸೋಂಕು ಹರಡುವಿಕೆ ಕಡಿಮೆ ಪ್ರಮಾಣದಲ್ಲಿದೆ. ದೇಶದಲ್ಲಿ ಸೋಂಕು ಸಮುದಾಯ ಹಂತ ತಲುಪಿಲ್ಲ, ಸೋಂಕು ಹರಡುವಿಕೆಯನ್ನು ತಡೆಗಟ್ಟುವಲ್ಲಿ ಲಾಕ್ ಡೌನ್ ಯಶಸ್ವಿಯಾಗಿದೆ ಎಂದು ಐಸಿಎಂಆರ್ ಮಹಾನಿರ್ದೇಶಕ ಪ್ರೊಫೆಸರ್ ಡಾ. ಬಲರಾಮ್ ಭಾರ್ಗವ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ದೇಶದಲ್ಲಿ ನಡೆಸಲಾಗುತ್ತಿರುವ ಸೆರೋ ಸರ್ವೆ ಪ್ರಕಾರ, ಇನ್ನೂ ಹೆಚ್ಚಿನ ಜನಸಂಖ್ಯೆ ಕೋವಿಡ್-19 ಸೋಂಕಿಗೆ ತುತ್ತಾಗುವ ಸಾಧ್ಯತೆಯಿದೆ. ಹಾಟ್'ಸ್ಪಾಟ್ ನಗರಗಳಲ್ಲಿನ ಅನೇಕ ಕಂಟೈನ್ಮೆಂಟ್ ಪ್ರದೇಶಗಳಲ್ಲಿನ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಸೋಂಕಿಗೊಳಗಾಗಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.