ದೇಶ

ಭಾರತ-ಚೀನಾ ಮಧ್ಯೆ ನಡೆದ ಎರಡನೇ ಸುತ್ತಿನ ಮೇಜರ್ ಜನರಲ್ ಮಟ್ಟದ ಮಾತುಕತೆ ಸಕಾರಾತ್ಮಕ: ಚೀನಾ

ಪೂರ್ವ ಲಡಾಕ್ ನ ಪಾಂಗೊಂಗ್ ಟ್ಸೊ ಮತ್ತು ಇತರ ಕೆಲ ಪ್ರದೇಶಗಳಲ್ಲಿ ಸೇನಾ ಪಡೆ ನಿಯೋಜನೆ,ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಗೊಂದಲಕ್ಕೆ ತೆರೆ ಎಳೆಯಲು ಭಾರತ ಮತ್ತು ಚೀನಾ ಸೇನಾಪಡೆಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ನಡೆಯಿತು.

ಭಾರತ-ಚೀನಾ ಮಧ್ಯೆ ನಡೆದ ಎರಡನೇ ಸುತ್ತಿನ ಮೇಜರ್ ಜನರಲ್ ಮಟ್ಟದ ಮಾತುಕತೆ ಸಕಾರಾತ್ಮಕ: ಚೀನಾ
ಕಳೆದ ವಾರ ನಡೆದಿದ್ದ ಮೇಜರ್ ಜನರಲ್ ಮಟ್ಟದ ಮಾತುಕತೆಯ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಪೂರ್ವ ಲಡಾಕ್ ನ ಪಾಂಗೊಂಗ್ ಟ್ಸೊ ಮತ್ತು ಇತರ ಕೆಲ ಪ್ರದೇಶಗಳಲ್ಲಿ ಸೇನಾ ಪಡೆ ನಿಯೋಜನೆ,ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಗೊಂದಲಕ್ಕೆ ತೆರೆ ಎಳೆಯಲು ಭಾರತ ಮತ್ತು ಚೀನಾ ಸೇನಾಪಡೆಗಳ ಮೇಜರ್ ಜನರಲ್ ಮಟ್ಟದ ಮಾತುಕತೆ ನಡೆಯಿತು.

ಸುಮಾರು ನಾಲ್ಕೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾರತದ ಸೇನಾಪಡೆ ನಿಯೋಗ, ಪೂರ್ವ ಲಡಾಕ್ ನ ಗಡಿ ವಾಸ್ತವ ನಿಯಂತ್ರಣ ರೇಖೆಯಲ್ಲಿ ಹಿಂದಿನ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಮತ್ತು ಗಡಿಯಿಂದ ಚೀನಾದ ಸೇನಾಪಡೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿತು.

ಸಕಾರಾತ್ಮಕ ವಾತಾವರಣದಲ್ಲಿ ಮೇಜರ್ ಜನರಲ್ ಮಟ್ಟದ ಮಾತುಕತೆ ನಡೆದಿದ್ದು, ಶಾಂತಿಯುತವಾಗಿ ಗಡಿ ಬಿಕ್ಕಟ್ಟನ್ನು ಕೊನೆಗಾಣಿಸಲು ಗಡಿಯ ಕೆಲವು ಪ್ರದೇಶಗಳಿಂದ ಈಗಾಗಲೇ ಸೇನಾಪಡೆಗಳನ್ನು ಹಿಂತೆಗೆದುಕೊಂಡಿವೆ.ಆದರೆ ಪಾಂಗೊಂಗ್ ಟ್ಸೊ, ದೌಲಟ್ ಬೆಗ್ ಒಲ್ಡಿ ಮತ್ತು ಡೆಮ್ಚೊಕ್ ಪ್ರದೇಶಗಳಲ್ಲಿ ಮಾತ್ರ ಇನ್ನೂ ಸೇನಾಪಡೆಗಳು ನಿಯೋಜನೆಯಲ್ಲಿದ್ದು ಅಲ್ಲಿನ ಉದ್ವಿಗ್ನ ಪರಿಸ್ಥಿತಿ ಕಡಿಮೆಯಾಗಿಲ್ಲ.

ಗಡಿಯುದ್ದಕ್ಕೂ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಿ ಸರಾಗ ವಾತಾವರಣ ನಿರ್ಮಾಣ ಮಾಡಲು ಕಳೆದ ಜೂನ್ 6 ರಂದು ಉಭಯ ದೇಶಗಳ ಹಿರಿಯ ಮಿಲಿಟರಿ ಅಧಿಕಾರಿಗಳು ಮಾತುಕತೆ ನಡೆಸಿ ಸಕಾರಾತ್ಮಕ ಒಮ್ಮತಕ್ಕೆ ಬಂದಿವೆ. ಗಡಿಯುದ್ದಕ್ಕೂ ಪರಿಸ್ಥಿತಿಯನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಎರಡೂ ದೇಶಗಳು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ನಿನ್ನೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನೈಂಗ್ ಬೀಜಿಂಗ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.