ತಿರುಪತಿ ತಿಮ್ಮಪ್ಪನ ದರ್ಶನ ಆರಂಭ: ಪ್ರತಿನಿತ್ಯ 6 ಸಾವಿರ ಭಕ್ತರಿಗೆ ಮಾತ್ರ ಅವಕಾಶ
ಕೊರೋನಾ ಲಾಕ್ಡೌನ್ನಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ.

ತಿರುಪತಿ: ಕೊರೋನಾ ಲಾಕ್ಡೌನ್ನಿಂದ ಬಂದ್ ಆಗಿದ್ದ ತಿರುಪತಿ ತಿಮ್ಮಪ್ಪನ ಸಾರ್ವಜನಿಕರ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಆಂಧ್ರಪ್ರದೇಶ ಸರ್ಕಾರದ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳ ನಡುವೆ ತಿಮ್ಮಪ್ಪನ ದರ್ಶನಕ್ಕೆ ಸೀಮಿತ ಸಂಖ್ಯೆಯ ಭಕ್ತರಿಗೆ ಅವಕಾಶ ನೀಡಲಾಗಿದೆ.
ಹೀಗಾಗಿ ಕೇವಲ 6 ಸಾವಿರ ಮಂದಿ ಭಕ್ತರು ಮಾತ್ರ ತಿಮ್ಮಪ್ಪನ ದರ್ಶನಕ್ಕೆ ಈಗಾಗಲೇ ಸಾಲಿನಲ್ಲಿ ನಿಂತಿದ್ಧಾರೆ. ಕೇಂದ್ರದ ಮಾರ್ಗಸೂಚಿಯ ಪ್ರಕಾರ 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳಿಗೆ ದರ್ಶನಕ್ಕೆ ಅವಕಾಶ ಇಲ್ಲ ಎಂದು ಟಿಡಿಪಿ ಸ್ಪಷ್ಟಪಡಿಸಿದೆ.
ದರ್ಶನಕ್ಕಾಗಿ ಈಗಾಗಲೇ ಆನ್ಲೈನ್ ಮೂಲಕ 3 ಸಾವಿರ ಜನರಿಗೆ ಟಿಕೆಟ್ ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಇನ್ನುಳಿದ 3 ಸಾವಿರ ಟಿಕೆಟ್ಗಳನ್ನು ತಿರುಪತಿಯ ಅಲಿಪಿರಿ ಕೌಂಟರ್ನಲ್ಲಿ ಕೊಡಲಾಗುತ್ತಿದೆ.
ಮೂರು ದಿನಗಳಿಂದ ಟಿಕೆಟ್‌ಗಾಗಿ ತುಂಬಾ ಜನ ಆಗಮಿಸುತ್ತಿದ್ದಾರೆ. ಹೀಗಾಗಿ ಕೇವಲ 11 ಗಂಟೆಯ ಒಳಗೆ ಎಲ್ಲಾ ಟಿಕೆಟ್‌ಗಳೂ ಮಾರಾಟವಾಗುತ್ತಿವೆ. ಬಾಲಾಜಿ ದರ್ಶನಕ್ಕೆ ಈವರೆಗೆ ಜೂನ್.30ರ ವರೆಗಿನ ಎಲ್ಲಾ 9,000 ಟಿಕೆಟ್‌ಗಳು ಮಾರಾಟ ಮಾಡಲಾಗಿದ್ದು, ಜೂನ್.12ರ ನಂತರ ಮತ್ತೆ ಟಿಕೆಟ್ ಮಾರಾಟ ಪ್ರಕ್ರಿಯೆ ಆರಂಭವಾಗಲಿದೆ ಎಂದು ಟಿಟಿಡಿ ಆಡಳಿತ ಮಂಡಳಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


