ದೇಶ

ಕೇರಳ: 6ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಗಾಂಜಾ ಮಾಫಿಯಾ ಕೈವಾಡ, ಪೋಷಕರ ಆರೋಪ!

11 ವರ್ಷದ ಬಾಲಕಿಯ ಮೃತದೇಹ ಆಕೆಯ ಕೋಣೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದರ ಹಿಂದೆ ಗಾಂಜಾ ಮಾಫಿಯಾ ಕೈವಾಡವಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕೇರಳ: 6ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಗಾಂಜಾ ಮಾಫಿಯಾ ಕೈವಾಡ, ಪೋಷಕರ ಆರೋಪ!
ಸಂಗ್ರಹ ಚಿತ್ರ
Published On :

ಕೊಲ್ಲಂ: 11 ವರ್ಷದ ಬಾಲಕಿಯ ಮೃತದೇಹ ಆಕೆಯ ಕೋಣೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದರ ಹಿಂದೆ ಗಾಂಜಾ ಮಾಫಿಯಾ ಕೈವಾಡವಿದೆ ಎಂದು ಪೋಷಕರು ಆರೋಪಿಸಿದ್ದಾರೆ. 

ಎನ್‌ಎಸ್‌ಎಸ್ ಎಚ್‌ಎಸ್‌ಎಸ್ ಪ್ರಕ್ಕುಲಂ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 6ನೇ ತರಗತಿ ವಿದ್ಯಾರ್ಥಿನಿ ಅಮೀನಾ ಮೃತದುರ್ದೈವಿ. ಇನ್ನು ಮಗಳ ಸಾವಿನ ಕುರಿತಂತೆ ಶಂಕೆ ವ್ಯಕ್ತಪಡಿಸಿರುವ ತಾಯಿ ನನ್ನ ಮಗಳು ಎಂದಿಗೂ ಅಂತಹ ಪ್ರಯತ್ನ ಮಾಡುವುದಿಲ್ಲ. ಆಕೆಯ ಸಾವಿನ ಹಿಂದೆ ಗಾಂಜಾ ಮಾಫಿಯಾ ಕೈವಾಡವಿದ್ದು ಸೂಕ್ತ ರೀತಿಯಲ್ಲಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. 

ಸಂಜೆಯ ದಿನನಿತ್ಯದ ಪ್ರಾರ್ಥನೆಗಳನ್ನು ನಡೆಸುವ ಮುನ್ನ ಅಮೀನಾ ತನ್ನ ತಾಯಿಗೆ ಮನೆಗೆಲಸದಲ್ಲಿ ಸಹಾಯ ಮಾಡುತ್ತಿದ್ದಾಳೆ. ನಂತರ ಮಲಗುವ ಕೋಣೆಗೆ ಹೋಗಿದ್ದಾಳೆ. ಎಷ್ಟು ಸಮಯವಾದರೂ ಬಾರದ ಮಗಳನ್ನು ಕರೆಯಲು ಕೋಣೆಗೆ ಹೋಗಿ ನೋಡಿದ್ದಾರೆ. ನೇಣು ಬಿಗಿದ ಸ್ಥಿತಿಯಲ್ಲಿ ಮಗಳನ್ನು ಕಂಡ ಅವರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಆಕೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. 

ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ಇದರ ಆಧಾರದ ಮೇಲೆ ಹೆಚ್ಚಿನ ತನಿಖೆ ಆರಂಭಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.