ಪಶ್ಚಿಮ ಬಂಗಾಳ: ಮಾಜಿ ಸಚಿವ ಮತ್ತು ಟಿಎಂಸಿ ಶಾಸಕ ಅಬಾನಿ ಮೋಹನ್ ಜೋರ್ದಾರ್ ನಿಧನ
ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಬನಿ ಮೋಹನ್ ಜೋರ್ದಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಕೊಲ್ಕೋತಾ: ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅಬನಿ ಮೋಹನ್ ಜೋರ್ದಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಜೋರ್ದಾರ್ 2010 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ್ದರು. 2011 ರಲ್ಲಿ ಕೃಷ್ಣಾ ನಗರ ಉತ್ತರ
ವಿಧಾನಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
ಅವರು ಟಿಎಂಸಿ ಸರ್ಕಾರದಲ್ಲಿ ತಿದ್ದುಪಡಿ ಸೇವೆಗಳ ಖಾತೆಯನ್ನು ಹೊಂದಿದ್ದರು. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಜೋರ್ದಾರ್ ನಿಧನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


