ದೇಶ

ಕೋವಿಡ್ ಪರಿಸ್ಥಿತಿ ಅವಲೋಕನಕ್ಕೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಕೋವಿಡ್ ಪರಿಸ್ಥಿತಿ ಅವಲೋಕನಕ್ಕೆ ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಕೋವಿಡ್ -19 ಸಾಂಕ್ರಾಮಿಕ ರೋಗದ ಪರಿಸ್ಥಿತಿಯನ್ನು ಪರಿಶೀಲಿಸಲು ಕರೆಯಲ್ಪಟ್ಟ ಈ ಸಭೆಯಲ್ಲಿ ರಾಷ್ಟ್ರಮಟ್ಟದಲ್ಲಿ ಸೋಂಕಿನ ಸ್ಥಿತಿಗತಿಯ ಬಗ್ಗೆ ಚರ್ಚಿಸಲಾಯಿತು.

ಈ ಸಭೆಯಲ್ಲಿ, ಮುಂದಿನ ಲಾಕ್‌ಡೌನ್ ಕುರಿತು ಮಾರ್ಗಸೂಚಿ ಮತ್ತು ಹೆಚ್ಚಿನ ಸಾಂಕ್ರಾಮಿಕ ಸೋಂಕಿನ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ದೆಹಲಿ ಸೇರಿದಂತೆ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊರೋನಾ ಪ್ರಕರಣಗಳ ಬಗ್ಗೆ ಮೋದಿ ಅವರು ಮಾಹಿತಿ ಪಡೆದುಕೊಂಡರು ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಭೆಯಲ್ಲಿ ಗೃಹ ಸಚಿವರು, ಆರೋಗ್ಯ ಸಚಿವರು, ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿ, ಕ್ಯಾಬಿನೆಟ್ ಕಾರ್ಯದರ್ಶಿ, ಆರೋಗ್ಯ ಕಾರ್ಯದರ್ಶಿ, ಐಸಿಎಂಆರ್ ಡಿಜಿ ಮತ್ತು ಇತರ ಉನ್ನತ ಗುಂಪುಗಳು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.