ಪ್ರತಿಭಾವಂತ ಯುವನಟ ಬಹುಬೇಗನೆ ಇಲ್ಲವಾದರು: ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
"ಸುಶಾಂತ್ ಸಿಂಗ್ ರಜಪೂತ್ ...ಪ್ರತಿಭಾವಂತ ಯುವನಟ, ಬಹಳ ಬೇಗ ಹೊರಟು ಹೋಗಿದ್ದಾರೆ.ಅವರು ಟಿವಿ ಮತ್ತು ಚಲನಚಿತ್ರಗಳಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ಮನರಂಜನಾ ಜಗತ್ತಿನಲ್ಲಿ ಅವರ ಏಳಿಗೆ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯನೆನಪನ್ನು ಬಿಟ್ಟು ಹೋಗಿದ್ದಾರೆ.ಅವರ ನಿಧನದಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪವಿದೆ. ಓಂ ಶಾಂತಿ, "ಮೋದಿ ಟ್ವೀಟ್ ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಚಲನಚಿತ್ರಗಳಲ್ಲಿ ನಟಿಸುವ ಮುನ್ನ ಕಿರುತೆರೆಯಲ್ಲಿ ತಮ್ಮ ಛಾಪು ಮೂಡಿಸಿದ್ದರು. ಕಾಯ್ ಪೋ ಚೆ ಚಿತ್ರದ ಮೂಲಕ ನಟ ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಯಶಸ್ವಿ ಚಲನಚಿತ್ರಗಳಲ್ಲಿ ಎಂಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ ಮತ್ತು ಚಿಚೋರ್ ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


