ಕೋವಿಡ್-19: 3.25 ಲಕ್ಷ ಸೋಂಕಿತರಲ್ಲಿ 1.68 ಲಕ್ಷ ಜನ ಚೇತರಿಕೆ, ಚೇತರಿಕೆ ಪ್ರಮಾಣ ಶೇ.50ಕ್ಕೂ ಹೆಚ್ಚು!
ದೇಶದಾದ್ಯಂತ ಭಾರೀ ಪ್ರಮಾಣದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣ ದಾಖಲಾಗುತ್ತಿರುವ ನಡುವೆಯೂ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.50ರ ಗಡಿ ದಾಡಿದೆ.

ನವದೆಹಲಿ: ದೇಶದಾದ್ಯಂತ ಭಾರೀ ಪ್ರಮಾಣದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣ ದಾಖಲಾಗುತ್ತಿರುವ ನಡುವೆಯೂ ಸಮಾಧಾನಕರ ಸುದ್ದಿಯೊಂದು ಹೊರಬಿದ್ದಿದೆ. ಇದೇ ಮೊದಲ ಬಾರಿಗೆ ಕೊರೋನಾ ವೈರಸ್ ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.50ರ ಗಡಿ ದಾಡಿದೆ.
ಈ ವರೆಗೆ ದೇಶದಲ್ಲಿ 3,25,136 ಸೋಂಕಿತರು ಪತ್ತೆಯಾಗಿದ್ದರೆ, 1,68,771 ಜನರು ಸಂಪೂರ್ಣವಾಗಿ ಚೇತರಿಸಿಕೊಂಡು ಆರೋಗ್ಯವಂತರಾಗಿ ಮನೆಗೆ ಮರಳಿದ್ದಾರೆ. ಇದರೊಂದಿಗೆ ಒಟ್ಟು ಚೇತರಿಸಿಕೊಂಡವರ ಪ್ರಮಾಣ ಶೇ.51.90ಕ್ಕೆ ತಲುಪಿದೆ.
ನಿನ್ನೆಯಷ್ಟೇ ದೇಶದಲ್ಲಿ ಒಂದೇ ದಿನ 11 ಸಾವಿರಕ್ಕೆ ಹೆಚ್ಚು ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 3.25 ಲಕ್ಷ ದಾಟಿದೆ. ಇದರಲ್ಲಿ ಮಹಾರಾಷ್ಟ್ರ ರಾಜ್ಯದ ಪಾಲೇ ಹೆಚ್ಚಾಗಿದ್ದು, ಒಂದೇ ದಿನ ಆ ರಾಜ್ಯದಲ್ಲಿ 3390 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07,958ಕ್ಕೆ ಮುಟ್ಟಿದೆ.
ದೆಹಲಿಯಲ್ಲಿ 2224, ತಮಿಳುನಾಡಿನಲ್ಲಿ 1947, ಗುಜರಾತ್ ನಲ್ಲಿ 511, ಪಶ್ಚಿಮ ಬಂಗಾಳ ರಾಜ್ಯದಲ್ಲಿ 389 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


