ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ನಾಯಕಿ ಸೋನಾಲಿ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ
ಸಾರ್ವಜನಿಕವಾಗಿಯೇ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡೆ ಹಾಗೂ ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಸೋನಾಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಚಂಡೀಗಢ: ಸಾರ್ವಜನಿಕವಾಗಿಯೇ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಬಿಜೆಪಿ ಮುಖಂಡೆ ಹಾಗೂ ಟಿಕ್ ಟಾಕ್ ಸ್ಟಾರ್ ಸೋನಾಲಿ ಫೋಗಟ್ ಅವರನ್ನು ಪೊಲೀಸರು ಬುಧವಾರ ಬಂಧಿಸಿದ್ದರು. ಬಳಿಕ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಸೋನಾಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಸೋನಾಲಿ ಫೋಗಟ್ ಅವರು ಜೂನ್ 5ರಂದು ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಮೇಲೆ ಹಲ್ಲೆ ನಡೆಸಿದ್ದರು. ಪೊಲೀಸರ ಎದುರೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ನಡೆದು 12 ದಿನಗಳ ನಂತರ ಇಂದು ಸೋನಾಲಿಯನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಆರೋಪಿ ಸೋನಾಲಿಯನ್ನು ಹಿಸಾರ್ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಆದರೆ ಪೊಲೀಸರ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ಸೋನಾಲಿ ಫೋಗಟ್ ಗೆ ಜಾಮೀನು ನೀಡಿದೆ.
ಸೋನಾಲಿ ಫೋಗಟ್ ಅವರು ಹರಿಯಾಣದ ಹಿಸಾರ್ ನ ಮಾರುಕಟ್ಟೆ ಸಮಿತಿಯ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದರು. ನಂತರ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಚಪ್ಪಲಿಯಿಂದ ಹೊಡೆದಿರುವುದಾಗಿ ಹೇಳಿಕೆ ನೀಡಿದ್ದರು.
ಹಿಸಾರ್ ಜಿಲ್ಲೆಯ ಅಡಂಪೂರ್‌ನಿಂದ 2019ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋನಾಲಿ ಫೋಗಟ್ ಸ್ಪರ್ಧಿಸಿ ಹಿರಿಯ ಕಾಂಗ್ರೆಸ್ ಮುಖಂಡ ಕುಲದೀಪ್ ಬಿಷ್ಣೋಯ್ ವಿರುದ್ಧ ಸೋಲು ಕಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


