ದೇಶದಲ್ಲಿ ಒಂದೇ ದಿನ 13,586 ಜನಕ್ಕೆ ಕೊರೋನಾ, ಸೋಂಕಿತರ ಸಂಖ್ಯೆ 3.80 ಲಕ್ಷಕ್ಕೆ ಏರಿಕೆ, 12,573 ಮಂದಿ ಸಾವು
ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಒಂದೇ ದಿನ 13,586 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ನವದೆಹಲಿ: ಕೊರೋನಾ ವೈರಸ್ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಒಂದೇ ದಿನ 13,586 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 336 ಮಂದಿಯನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದ್ದು, ಈ ಮೂಲಕ ಸಾವಿನ ಸಂಖ್ಯೆ 12,573ಕ್ಕೆ ತಲುಪಿದೆ.
ಇನ್ನು 3,80,532 ಮಂದಿ ಸೋಂಕಿತರ ಪೈಕಿ 2,04,711 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 1,63,248 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಹಾಗೂ ಉತ್ತರಪ್ರದೇಶಗಳು ಅತೀ ಹೆಚ್ಚು ಕೊರೋನಾಪೀಡಿತ ರಾಜ್ಯಗಳಾಗಿ ಮುಂದುವರಿದಿವೆ. ಸಮಾಧಾನದ ಸಂಗತಿಯೆಂದರೆ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.53ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


