ದೇಶಾದ್ಯಂತ 24 ಗಂಟೆಗಳಲ್ಲಿ 14933 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 4.40 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಮಂಗಳವಾರ ಬರೋಬ್ಬರಿ 14,933 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 440215ಕ್ಕೆ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದ್ದು, ಮಂಗಳವಾರ ಬರೋಬ್ಬರಿ 14,933 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 440215ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಒಂದೇ ದಿನ ಮಹಾಮಾರಿ ವೈರಸ್'ಗೆ 312 ಮಂದಿ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ 14933ಕ್ಕೆ ತಲುಪಿದಂತಾಗಿದೆ.
ಈ ನಡುವೆ 440215 ಮಂದಿ ಸೋಂಕಿತರ ಪೈಕಿ 248190 ಸೋಂಕಿನಿಂದ ಗುಣಮುಖರಾಗಿದ್ದು, 178014 ಮಂದಿ ಇನ್ನು ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಸತತ 11 ದಿನಗಳಿಂದ 10ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಜೂ.1ರಿಂದ ಜೂ.21ರ ಅವಧಿಯಲ್ಲಿ 2,31,747 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


