ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್
ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಪುರಿ: ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಪುರಿ ಜಗನ್ನಾಥ ದೇವಾಲಯದ ಎಲ್ಲಾ ಅರ್ಚಕರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಒಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರಿಗೆ ರಥಯಾತ್ರೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿಲ್ಲ ಎಂದು ಒಡಿಶಾ ರಾಜ್ಯದ ಕಾನೂನು ಸಚಿವ ಪ್ರತಾಪ್ ಜೀನಾ ತಿಳಿಸಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡಲು ಸುಪ್ರೀಂಕೋರ್ಟ್ ಈ ಮೊದಲು ನಿರಾಕರಿಸಿತ್ತು. ಲಾಕ್ ಡೌನ್ ನಿರ್ಬಂಧಗಳನ್ನು ಉಲ್ಲಂಘಿಸಿ ರಥಯಾತ್ರೆ ನಡೆಸಿದರೆ ಆ ದೇವರು ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಈ ಹಿಂದೆ ನ್ಯಾಯಪೀಠ ಅಭಿಪ್ರಾಯಪಟ್ಟಿತ್ತು.
ಆದಾಗ್ಯೂ, ನಿನ್ನೆ ಜೂನ್ 18 ರಂದು ನೀಡಿದ್ದ ತನ್ನ ತೀರ್ಪನ್ನು ಬದಲಾಯಿಸಿ ರಥಯಾತ್ರೆಗೆ ಷರತ್ತುಬದ್ಧ ಅವಕಾಶವನ್ನು ಸುಪ್ರೀಂ ಕೋರ್ಟ್ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


