ದೇಶ

ರಷ್ಯಾದಲ್ಲಿ ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ: ಚೀನಾ ವರದಿ ತಿರಸ್ಕರಿಸಿದ ಭಾರತ

ಭಾರತ-ರಷ್ಯಾ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 3 ದಿನಗಳ ಕಾಲ ರಷ್ಯಾ ಪ್ರವಾಸ ಕೈಗೊಂಡಿದ್ದು, ಭೇಟಿ ವೇಳೆ ಚೀನಾ ರಕ್ಷಣಾ ಸಚಿವರೊಂದಿಗೂ ಮಾತುಕತೆ ನಡೆಸಲಿದ್ದಾರೆಂಬ ಚೀನಾದ ವರದಿಯನ್ನು ಭಾರತ ತಿರಸ್ಕರಿಸಿದೆ.

ರಷ್ಯಾದಲ್ಲಿ ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ: ಚೀನಾ ವರದಿ ತಿರಸ್ಕರಿಸಿದ ಭಾರತ
ರಷ್ಯಾದಲ್ಲಿ ರಾಜನಾಥ್ ಸಿಂಗ್
Published On :

ನವದೆಹಲಿ: ಭಾರತ-ರಷ್ಯಾ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 3 ದಿನಗಳ ಕಾಲ ರಷ್ಯಾ ಪ್ರವಾಸ ಕೈಗೊಂಡಿದ್ದು, ಭೇಟಿ ವೇಳೆ ಚೀನಾ ರಕ್ಷಣಾ ಸಚಿವರೊಂದಿಗೂ ಮಾತುಕತೆ ನಡೆಸಲಿದ್ದಾರೆಂಬ ಚೀನಾದ ವರದಿಯನ್ನು ಭಾರತ ತಿರಸ್ಕರಿಸಿದೆ. 

2ನೇ ವಿಶ್ವಯುದ್ಧದಲ್ಲಿ ಜರ್ಮನಿ ವಿರುದ್ಧ ಸೋವಿಯತ್ ಒಕ್ಕೂಟ ಜಯ ಸಾಧಿಸಿದ 75ನೇ ವರ್ಷಾಚರಣೆಯ ಪಥಸಂಚಲನ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾರತ ಹಾಗೂ ಚೀನಾದ ಇಬ್ಬರೂ ರಕ್ಷಣಾ ಸಚಿವರು ಪಾಲ್ಗೊಳ್ಳುತ್ತಿದ್ದಾರೆ. 

ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಚೀನಾದ ಗ್ಲೋಬಲ್ ಟೈಮ್ಸ್ ವರದಿಯೊಂದನ್ನು ಪ್ರಕಟಿಸಿ, ಚೀನಾ ಹಾಗೂ ಭಾರತದ ರಕ್ಷಣಾ ಸಚಿವರು ಗಡಿ ಸಂಘರ್ಷ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಿತ್ತು. 

ಈ ವರದಿ ಕುರಿತು ರಕ್ಷಣಾ ಸಚಿವಾಲಯದ ವಕ್ತಾರ ಭರತ್ ಭೂಷಣ್ ಬಾಬು ಅವರು ಪ್ರತಿಕ್ರಿಯೆ ನೀಡಿದ್ದು, ಉಭಯ ರಾಷ್ಟ್ರಗಳ ರಕ್ಷಣಾ ಸಚಿವರೊಂದಿಗೆ ಅಂತರ ಯಾವುದೇ ರೀತಿಯ ಮಾತುಕತೆಗಳು ನಡೆದಿಲ್ಲ. ಭಾರತದ ರಕ್ಷಣಾ ಸಚಿವರು ಚೀನಾ ರಕ್ಷಣಾ ಸಚಿವರ ನಡುವೆ ಯಾವುದೇ ರೀತಿಯ ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.