ದೇಶದಲ್ಲಿ ಒಂದೇ ದಿನ 16,922 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ, 418 ಮಂದಿ ಸಾವು
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಏರುಗತಿ ಮುಂದುವರೆದಿದ್ದು, ಗುರುವಾರ ದೇಶದಲ್ಲಿ 16,922 ಮಂದಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 4,73,105ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಏರುಗತಿ ಮುಂದುವರೆದಿದ್ದು, ಗುರುವಾರ ದೇಶದಲ್ಲಿ 16,922 ಮಂದಿಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 4,73,105ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ,
ಇದೇ ವೇಳೆ ಕೊರೋನಾಗೆ ಮತ್ತೆ 418 ಮಂದಿ ಬಲಿಯಾಗಿದ್ದು, ಮೃತಪಟ್ಟವರ ಸಂಖ್ಯೆ 14,894ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.
ಈ ನಡುವೆ 4,73,105 ಮಂದಿ ಸೋಂಕಿತರ ಪೈಕಿ 2,71,697 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ರಾಷ್ಟ್ರದಲ್ಲಿ 1,86,514 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಇನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆ ದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡು ಬಂದಿದ್ದು, ಒಂದೇ ದಿನ 2.15ಲಕ್ಷ ಪರೀಕ್ಷೆಗಳನ್ನು ಮಾಡಲಾಗಿದೆ.
ಭಾರತದಲ್ಲಿ ಕೊರೋನಾ ಸೋಂಕು ಆರಂಭವಾದ ಬಳಿ ಮಾಡಲಾದ ಅತಿ ಹೆಚ್ಚಿನ ಪ್ರಮಾಣದ ಮಾದರಿ ಪರೀಕ್ಷೆ ಇದಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಒಟ್ಟು 73.5 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಂತಾಗಿದೆ. ಭಾರತದಲ್ಲಿ ಈಕ ಕೊರೋನಾ ವೈರಸ್ ಪರೀಕ್ಷಿಸುವ 1,000 ಲ್ಯಾಬ್ ಗಳು ಇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


