ದೇಶ

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರ ದಾಳಿ, ಸಿಆರ್'ಪಿಎಫ್ ಯೋಧ ಹುತಾತ್ಮ, ಅಪ್ರಾಪ್ತ ಬಾಲಕ ಸಾವು

ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮನಾಗಿ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಜಮ್ಮು-ಕಾಶ್ಮೀರ: ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರ ದಾಳಿ, ಸಿಆರ್'ಪಿಎಫ್ ಯೋಧ ಹುತಾತ್ಮ, ಅಪ್ರಾಪ್ತ ಬಾಲಕ ಸಾವು
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್'ಪಿಎಫ್ ಯೋಧ ಹುತಾತ್ಮನಾಗಿ ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. 

ಇಂದು ಮಧ್ಯಾಹ್ನ 12.10ರ ಸುಮಾರಿಗೆ ದಕ್ಷಿಣ ಕಾಶ್ಮೀರದ ಬಿಜ್ಬೆಹರಾ ಪ್ರದೇಶದಲ್ಲಿರುವ ಪಾಡ್‌ಶಾಹಿ ಬಾಗ್ ಸೇತುವೆ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 90 ಬಿಟಾಲಿಯನ್ ಪಡೆದ ಸಿಆರ್'ಪಿಎಫ್ ಯೋಧರೊಬ್ಬರು ಹಾಗೂ ನಾಲ್ಕು ವರ್ಷದ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕೂಡಲೇ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದೀಗ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.