ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ದಾಳಿ
ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ದೆಹಲಿ: ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ ಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಮನೆ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಅಹ್ಮದ್ ಪಟೇಲ್ ಅವರ ದೆಹಲಿಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಪ್ರಕರಣ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.ಇದಕ್ಕೂ ಮುಂಚೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ, ತಾವೊಬ್ಬ ಹಿರಿಯ ನಾಗರಿಕರಾಗಿದ್ದು,ಕೋವಿಡ್-19 ಸಾಂಕ್ರಾಮಿಕ ರೋಗದ ಮಾರ್ಗಸೂಚಿ ಹಿನ್ನೆಲೆಯಲ್ಲಿ ವಿಚಾರಣೆಗೆ ಬರುವುದಕ್ಕೆ ಆಗಲ್ಲ ಎಂದು ಅಹ್ಮದ್ ಪಟೇಲ್ ಹೇಳಿದ್ದರು.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 65ವರ್ಷಕ್ಕೂ ಮೇಲ್ಪಟ್ಟವರು ಮನೆಯಲ್ಲಿ ಇರುವಂತೆ ಆರೋಗ್ಯ ಸಚಿವಾಲಯ ಸಲಹೆಯನ್ನೊಳಗೊಂಡ ಮಾರ್ಗಸೂಚಿ ಹೊರಡಿಸಿತ್ತು.
ಸ್ಟರ್ಲಿಂಗ್ ಬಯೋಟೆಕ್ ಆಂಧ್ರ ಬ್ಯಾಂಕ್ ನೇತೃತ್ವದಲ್ಲಿ 5 ಸಾವಿರ ಕೋಟಿ ರೂ. ಸಾಲ ಪಡೆದಿದ್ದು, ಅದನ್ನು ಕಾರ್ಯನಿರ್ವಹಿಸದ ಸ್ವತ್ತುಗಳಾಗಿ ಮಾರ್ಪಡಿಸಲಾಗಿದೆ. ಸಾಲ ವಂಚನೆಯ ಒಟ್ಟು ಮೊತ್ತವನ್ನು 8,100 ಕೋಟಿ ರೂ. ಆಗಿದೆ ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


