ಎಐಸಿಸಿ ಕಚೇರಿಗೂ ವಕ್ಕರಿಸಿದ ಕೊರೋನಾ ಸೋಂಕು: ಆತಂಕದಲ್ಲಿ ಕಾಂಗ್ರೆಸ್ ನಾಯಕರು
ದೇಶದಲ್ಲಿ ಕೊರೊನಾ ಸೋಂಕು ಆತಂಕ ತಂದಿದ್ದು, ಈಗ ಎಐಸಿಸಿ ಕಚೇರಿಗೂ ಕೊರೊನಾ ಭೀತಿ ಎದುರಾಗಿದೆ. ಕಚೇರಿಯ ಸಿಬ್ಬಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಕೆಲ ದಿನಗಳಿಂದ ಕಚೇರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಕರೋನ ಬೀತಿ ಕಾಡಲಾರಂಭಿಸಿದೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಆತಂಕ ತಂದಿದ್ದು, ಈಗ ಎಐಸಿಸಿ ಕಚೇರಿಗೂ ಕೊರೊನಾ ಭೀತಿ ಎದುರಾಗಿದೆ. ಕಚೇರಿಯ ಸಿಬ್ಬಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಕೆಲ ದಿನಗಳಿಂದ ಕಚೇರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಕರೋನ ಬೀತಿ ಕಾಡಲಾರಂಭಿಸಿದೆ.
ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೊರೊನಾ ವಿಪತ್ತು ಹಿನ್ನೆಲೆಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದ ಮೇರೆಗೆ ರಾಜ್ಯ ಕಾಂಗ್ರೆಸ್ ಸಮಿತಿಗಳು ಇಲ್ಲಿ ತೆರೆದಿದ್ದ ಕಂಟ್ರೋಲ್ ರೂಂಗೆ ಮಾಹಿತಿ ನೀಡುತ್ತಿದ್ದವು .
ಪ್ರತೀ ರಾಜ್ಯದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ವರದಿ ಪಡೆಯಲು ಕಂಟ್ರೋಲ್ ರೂಮ್ನಲ್ಲಿ ಹಲವರು ಕೆಲಸ ಮಾಡುತ್ತಿದ್ದರು. ಇಲ್ಲಿ ಕೆಲಸ ಮಾಡುತ್ತಿದ್ದ ಎಐಸಿಸಿ ಕಚೇರಿ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾರಕ ಕೊರೋನಾ ವೈರಸ್ ಈಗ ಎಐಸಿಸಿ ಸಿಬ್ಬಂದಿಗೂ ವಕ್ಕರಿಸಿದೆ. ಸದ್ಯ ಕೊರೋನಾ ಸೋಂಕಿತ ಎಐಸಿಸಿ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಈತ ಕೆಲಸ ಮಾಡುತ್ತಿದ್ದ ಕಾರಣ ಈ ಎಐಸಿಸಿ ಕಚೇರಿಯನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.
ಇತ್ತೀಚೆಗೆ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿಗೆ ಸೋಂಕು ತಗುಲಿತ್ತು. ಕೋವಿಡ್-19 ಸೋಂಕು ದೃಢವಾಗುತ್ತಿದ್ದಂತೆಯೇ ಕಾಂಗ್ರೆಸ್ನ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೋಮ್ ಕ್ವಾರಂಟೈನ್ಗೆ ಒಳಗಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


