ದೇಶ

ಕೊರೋನಾ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೊರೋನಾ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,21,723  ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ ಪ್ರಸ್ತುತ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 380 ಮಂದಿ ಸೋಂಕಿತರು ಸಾವನ್ಮಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಮುಗಿಲುಮುಟ್ಟಿದ್ದು, ದೆಹಲಿಯಲ್ಲಿ ಇದೀಗ ಕೊರೋನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿದಾಟಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ.

ಇನ್ನು ಕೊರೋನಾ ಸೋಂಕಿತರ ಗರಿಷ್ಠ ಸಂಖ್ಯೆ ಪಟ್ಟಿಯಲ್ಲಿ ಅಗ್ರ ಸ್ಥಾನಿಯಾಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ. 

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 783 ಪ್ರಕರಣಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1267 ಪ್ರಕರಣಗಳು ವರದಿಯಾಗಿದ್ದು, 16 ಮಂದಿ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 13190ಕ್ಕೇರಿಕೆಯಾಗಿದ್ದು, ಮೃತರ ಸಂಖ್ಯೆ 211 ತಲುಪಿದೆ.

Related Article

ತಮಿಳುನಾಡು: ಒಂದೇ ದಿನ 3,940 ಹೊಸ ಕೊರೋನಾ ಸೋಂಕು ಪ್ರಕರಣಗಳ ದಾಖಲು, 54 ಸಾವು!

ಕೇರಳಕ್ಕೆ ಮತ್ತೆ ಕೊರೋನಾಘಾತ; ಒಂದೇ ದಿನ 118 ಸೋಂಕು ಪ್ರಕರಣ ದಾಖಲು

ಮುಂಬೈನಲ್ಲಿ ಮತ್ತೆ 1,460 ಹೊಸ ಕೊರೋನಾ ಸೋಂಕು ಪ್ರಕರಣ, ಸೋಂಕಿತರ ಸಂಖ್ಯೆ 80,188 ಕ್ಕೆ ಏರಿಕೆ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 5493 ಹೊಸ ಸೋಂಕಿತರ ದಾಖಲು, 156 ಸೋಂಕಿತರ ಸಾವು!

ದೆಹಲಿ: ಒಂದೇ ದಿನ 2889 ಹೊಸ ಸೋಂಕು ಪ್ರಕರಣ, 83 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.