ಇಂಧನ ಬೆಲೆ ಏರಿಸುವ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ: ಸೋನಿಯಾ ಗಾಂಧಿ
ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ನಂತರ 22 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇಂಧನ ದರ ಏರಿಕೆ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ನಂತರ 22 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇಂಧನ ದರ ಏರಿಕೆ ಮೂಲಕ ಸರ್ಕಾರ ಜನರ ಸುಲಿಗೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ‘ಇಂಧನ ದರ ಏರಿಕೆ ವಿರುದ್ಧ ದನಿಯೆತ್ತಿ’ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಸೋನಿಯಾ, ಬೆಲೆ ಏರಿಕೆ ನಿರ್ಧಾರವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಜನರ ವೆಚ್ಚದ ಮೂಲಕ ಸರ್ಕಾರ ಲಾಭ ಗಳಿಸಲು ಹೊರಟಿದೆ. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಜನರಿಗೆ ನೆರವಾಗುವುದು ಬಿಟ್ಟು ಅವರು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಲಾಭ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಒಂದೆಡೆ ಕೊರೊನಾ ವೈರಸ್ ಸಾಂಕ್ರಾಮಿಕದಿಂದ ಜನ ಸಂಕಷ್ಟಕ್ಕೆ ಸಿಲುಕಿರುವಾಗಲೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಜೀವನವನ್ನು ಮತ್ತಷ್ಟು ಕಷ್ಟಕರವಾಗಿಸಿದೆ ಎಂದು ಹೇಳಿದ್ದಾರೆ.
ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಸಾಮಾಜಿಕ ಮಾಧ್ಯಗಳಲ್ಲಿ ಅಭಿಯಾನದಲ್ಲಿ ಭಾಗಿಯಾಗಿದ್ದು, ಇಂಧನ ದರ ಕಡಿಮೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


