ಮುಂಬೈ: ತಾಜ್ ಹೋಟೆಲ್ ಮೇಲೆ ಪಾಕಿಸ್ತಾನದಿಂದ ಬಾಂಬ್ ಬೆದರಿಕೆ ಕರೆ, ಬಿಗಿ ಭದ್ರತೆ
ವಾಣಿಜ್ಯ ನಗರಿ ಮುಂಬೈಯ ತಾಜ್ ಹೋಟೆಲ್ ಮೇಲೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ತಡರಾತ್ರಿ 12-30ರ ವೇಳೆಯಲ್ಲಿ ಕರಾಚಿಯಿಂದ ಕರೆ ಬಂದಿರುವ ಬಗ್ಗೆ ಮಾಹಿತಿ ದೊರೆತಿದೆ.

ಮುಂಬೈ: ವಾಣಿಜ್ಯ ನಗರಿ ಮುಂಬೈಯ ತಾಜ್ ಹೋಟೆಲ್ ಮೇಲೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ತಡರಾತ್ರಿ 12-30ರ ವೇಳೆಯಲ್ಲಿ ಕರಾಚಿಯಿಂದ ಕರೆ ಬಂದಿರುವ ಬಗ್ಗೆ ಮಾಹಿತಿ ದೊರೆತಿದೆ.
ತಾಜ್ ಹೋಟೆಲ್ ಮತ್ತು ಬಾಂದ್ರಾದ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ ಬೆದರಿಕೆ ಕರೆಗಳನ್ನು ಸ್ವೀಕರಿಸುತ್ತಿದ್ದಂತೆಯೇ ಹೋಟೆಲ್
ಹೊರಗಡೆ ಹಾಗೂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.
ಭದ್ರತಾ ಸಿಬ್ಬಂದಿ ಹೋಟೆಲ್ ಸುತ್ತಮುತ್ತ ಓಡಾಡುತ್ತಿರುವ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಹೋಟೆಲ್ ಆವರಣವನ್ನು ಶೋಧಿಸಲಾಗುತ್ತಿದೆ.ಮುಂಜಾಗ್ರತಾ ಕ್ರಮವಾಗಿ ತಾಜ್ ಹೋಟೆಲ್ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಪಾಕಿಸ್ತಾನದಿಂದ ಕರೆ ಮಾಡಿರುವ ವ್ಯಕ್ತಿ ತನ್ನನ್ನು ಲಷ್ಕರ್ ಇ- ತೊಯ್ಹಾ ಸಂಘಟನೆಯ ಸದಸ್ಯ ಎಂದು ಪರಿಚಯಿಸಿಕೊಂಡಿದ್ದಾನೆ.
ಸೋಮವಾರ ತಡರಾತ್ರಿ 12-30ಕ್ಕೆ ಮೊದಲ ಕರೆ ಬಂದಿದ್ದು, 2008 ನವೆಂಬರ್ ನಲ್ಲಿ ನಡೆದಂತೆ ಲಷ್ಕರ್ -ಇ- ತೊಯ್ಬಾ ಉಗ್ರರಿಂದ ಹೋಟೆಲ್ ಮೇಲೆ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾನೆ.
ಬಾಂದ್ರಾದಲ್ಲಿನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ ಸಿಬ್ಬಂದಿ ಎರಡನೇ ಬಾರಿಗೆ ಕರೆ ಸ್ವೀಕರಿಸಿದಾಗ, ಎರಡು ಹೋಟೆಲ್ ಗಳಿಗೆ ಬಾಂಬ್ ಹಾಕಲಾಗುವುದು ಎಂದು ಬೆದರಿಸಿದ್ದಾನೆ. ಎರಡು ಕರೆಗಳು ಒಂದೇ ನಂಬರ್ ನಿಂದ ಬಂದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


