ದೇಶ

ಮಧ್ಯ ಪ್ರದೇಶ: ಗೂಡ್ಸ್ ರೈಲುಗಳ ಢಿಕ್ಕಿ ಪ್ರಕರಣ: 3 ಸಾವು, ಓರ್ವನಿಗೆ ಗಾಯ

ಮಧ್ಯ ಪ್ರದೇಶದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್​​ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋ ಪೈಲಟ್ ಗಳು ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯ ಪ್ರದೇಶ: ಗೂಡ್ಸ್ ರೈಲುಗಳ ಢಿಕ್ಕಿ ಪ್ರಕರಣ: 3 ಸಾವು, ಓರ್ವನಿಗೆ ಗಾಯ
ರೈಲುಗಳ ಮುಖಾಮುಖಿ ಡಿಕ್ಕಿ
Published On :

ಭೋಪಾಲ್​: ಮಧ್ಯ ಪ್ರದೇಶದಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್​​ ರೈಲುಗಳು ಮುಖಾಮುಖಿ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋ ಪೈಲಟ್ ಗಳು ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ಕಲ್ಲಿದ್ದಲು ಹೊತ್ತೊಯ್ಯುತ್ತಿದ್ದ ಎನ್​ಟಿಪಿಸಿ(National Thermal Power Corporation) ರೈಲುಗಳು ಸಿಂಗ್ರಾವ್ಲೀ ಬಳಿ ಪರಸ್ಪರ ಡಿಕ್ಕಿ ಹೊಡೆದಿತ್ತು. ಪರಿಣಾಮ ರೈಲಿನ ಬೋಗಿಗಳು ಟ್ರ್ಯಾಕ್​ನಿಂದ ಪಕ್ಕಕ್ಕೆ ಉರುಳಿಬಿದ್ದಿವೆ. 

ದುರ್ಘಟನೆಯಲ್ಲಿ ಲೋಕೋ ಪೈಲಟ್​ ಹಾಗೂ ಸಹಾಯಕ ಲೋಕೋ ಪೈಲಟ್ ಸೇರಿದಂತೆ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದು, ಓರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ದುರಂತ ಸ್ಥಳಕ್ಕೆ ಪೊಲೀಸರು ಹಾಗೂ ಎನ್​ಟಿಪಿಸಿ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.