ಅಬ್ಬಬ್ಬಾ... ಬರೋಬ್ಬರಿ ಆರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ಗರ್ಭಿಣಿ ಮಹಿಳಯೊಬ್ಬರು ಒಂದಲ್ಲ, ಎರಡಲ್ಲ, ಮೂರೂ ಅಲ್ಲ... ಬರೋಬ್ಬರಿ 6 ಮಕ್ಕಳಿಗೆ ಜನ್ಮ ನೀಡಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡದಿದೆ.

ಶಿಯೋಪುರ್: ಗರ್ಭಿಣಿ ಮಹಿಳಯೊಬ್ಬರು ಒಂದಲ್ಲ, ಎರಡಲ್ಲ, ಮೂರಲ್ಲ... ಬರೋಬ್ಬರಿ 6 ಮಕ್ಕಳಿಗೆ ಜನ್ಮ ನೀಡಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡದಿದೆ.
ಶಿಯೋಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆಂದು ಬಂದಿರುವ ಮಹಿಳೆ 6 ಮಕ್ಕಳಿಗೆ ಜನ್ಮ ನೀಡಿದ್ದು, ಜನ್ಮ ನೀಡಿದ ಕೆಲವೇ ಕ್ಷಣಗಳಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.
ನಾಲ್ಕು ಗಂಡು ಮಕ್ಕಳು ಹಾಗೂ 2 ಹೆಣ್ಣು ಮಕ್ಕಳಿಗೆ ಮಹಿಳೆ ಜನ್ಮ ನೀಡಿದ್ದು, ಹುಟ್ಟಿದ ಮಕ್ಕಳು ಸಾಮಾನ್ಯ ತೂಕಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಮೃತಪಟ್ಟ ಹೆಣ್ಣು ಮಕ್ಕಳು 615 ಗ್ರಾಂ ಹಾಗೂ 790 ಗ್ರಾಂಗಳಷ್ಟಿದ್ದವು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇದೊಂದು ಅಪರೂಪದ ಪ್ರಕರಣವಾಗಿದ್ದು, ಅನೇಕ ಗರ್ಭಧಾರಣೆಗಲು ಸ್ವಯಂಪ್ರೇರಿತವಾಗಿ ಸಂಭವಿಸುವ ಸಾಧ್ಯತೆಗಳು ಬಹಳ ವಿರಳವಾಗಿದೆ. ಬಂಜೆತನದ ವೇಳೆ ತೆಗೆದುಕೊಳ್ಳುವ ಚಿಕಿತ್ಸೆಗಳು ಈ ರೀತಿಯ ಘಟನೆಗಳು ಸಂಭವಿಸುವಂತೆ ಮಾಡುತ್ತವೆ. ಇದೊಂದು ಅತ್ಯಂತ ಅಪರೂಪದ ಪ್ರಕರಣವಾಗಿದೆ. ಮಹಿಳೆ ಈ ಹಿಂದೆ ಯಾವುದೇ ರೀತಿಯ ಚಿಕಿತ್ಸಗಳನ್ನು ಪಡೆದುಕೊಳ್ಳದೇ ಸ್ವಾಭಾವಿಕವಾಗಿ ಜನ್ಮ ನೀಡಿದ್ದಾರೆಂದು ವೈದ್ಯೆ ಮೀಟಾ ಅಗರ್ವಾಲ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


