ಶಿವಸೇನೆಯ ಮುಖವಾಣಿ 'ಸಾಮ್ನಾ' ಸಂಪಾದಕಿಯಾಗಿ ಉದ್ಧವ್ ಠಾಕ್ರೆಪತ್ನಿ ರಶ್ಮಿ ನೇಮಕ
ಶಿವಸೇನಾ ಪಕ್ಷದ ಮುಖವಾಣಿ ಸಾಮ್ನಾ ದ ಸಂಪಾದಕರನ್ನಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಪಕ್ಷದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಆಯ್ಕೆಯಾಗಿದ್ದಾರೆ.

ಮುಂಬೈ: ಶಿವಸೇನಾ ಪಕ್ಷದ ಮುಖವಾಣಿ ಸಾಮ್ನಾ ದ ಸಂಪಾದಕರನ್ನಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಹಾಗೂ ಶಿವಸೇನೆ ಪಕ್ಷದ ಮುಖ್ಯಸ್ಥರಾದ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಆಯ್ಕೆಯಾಗಿದ್ದಾರೆ.
ಮರಾಠಿ ಭಾಷೆಯ ಪತ್ರಿಕೆಯ ಭಾನುವಾರದ ಆವೃತ್ತಿಯ ಕೊನೆಯ ಪುಟವು ರಶ್ಮಿ ಠಾಕ್ರೆ ಅವರ ಹೆಸರನ್ನು ಸಂಪಾದಕರಾಗಿ ಮುದ್ರಿಸಿತು,
ಶಿವಸೇನೆಯ ಹಿರಿಯ ಣಾಯಕ ಸಂಜಯ್ ರೌತ್ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಮುಂದುವರಿಯಲಿದ್ದಾರೆ.
ಶಿವಸೇನೆ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ನಿಧನರಾದಂದಿನಿಂದ ಉದ್ಧವ್ ಠಾಕ್ರೆ ಸಾಮ್ನಾದ ಸಂಪಾದಕರಾಗಿದ್ದರು. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಅವರು 2019 ರ ನವೆಂಬರ್ 28 ರಂದು ಪತ್ರಿಕಾ ಸಂಪಾದಕನ ಸ್ಥಾನಕ್ಕೆ ರಾಜೀನಾಮೆ ನೀಡಿದರು ನವೆಂಬರ್ 2012 ರಲ್ಲಿ ಬಾಳಾ ಸಾಹೇಬ್ ಠಾಕ್ರೆ ತಾವು ಮರಣಿಸುವವರೆಗೆ ಸಾಮ್ನಾದ ಸ್ಥಾಪಕ ಸಂಪಾದಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


