ಭಯೋತ್ಪಾದನೆ ಕುರಿತು ಭಾರತ ಯಾವುದೇ ರೀತಿಯ ಸಹಿಷ್ಣುತೆ ಹೊಂದಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಭಯೋತ್ಪಾದನೆ ಬಗ್ಗೆ ಭಾರತವು ಸಹಿಷ್ಣುತೆ ಹೊಂದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೋಲ್ಕತಾ: ಭಯೋತ್ಪಾದನೆ ಬಗ್ಗೆ ಭಾರತವು ಸಹಿಷ್ಣುತೆ ಹೊಂದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಾನುವಾರ ಕೋಲ್ಕತದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್‌ಎಸ್‌ಜಿ) ಹೊಸ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪೂರ್ವಭಾವಿ ರಕ್ಷಣಾ ನೀತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಸರ್ಜಿಕಲ್ ಸ್ಟ್ರೈಕ್ ನಡೆಸಿದ ನಂತರ ಭಾರತವೀಗ ಅಮೆರಿಕಾ ಮತ್ತು ಇಸ್ರೇಲ್‌ನಂತಹ ದೇಶಗಳ ಸಾಲಿಗೆ ಸೇರಿದೆ' ಎಂದು ಹೇಳಿದರು.
ಇದೇ ವೇಳೆ 'ರಾಷ್ಟ್ರವನ್ನು ಇಬ್ಭಾಗ ಮಾಡಿ, ಶಾಂತಿ ಕದಡಲು ಬಯಸಿರುವ ಜನರು ಖಂಡಿತವಾಗಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿ(ಎನ್‌ಎಸ್‌ಜಿ)ಗೆ ಭಯಪಡಲೇಬೇಕು. ಜಾಗತಿಕವಾಗಿ ನಾವು ಶಾಂತಿಯನ್ನು ಬಯಸಿದ್ದೇವೆ. ನಮ್ಮ 10,000 ವರ್ಷಗಳ ಇತಿಹಾಸದಲ್ಲಿ ಭಾರತ ಯಾರೊಬ್ಬರ ಮೇಲೂ ಆಕ್ರಮಣ ಮಾಡಿಲ್ಲ. ಶಾಂತಿಯನ್ನು ಕದಡಲು ಯಾರೊಬ್ಬರಿಗೂ ಅವಕಾಶ ಮಾಡಿಕೊಟ್ಟಿಲ್ಲ. ಆದರೆ, ಯಾರು ನಮ್ಮ ಯೋಧರ ಪ್ರಾಣವನ್ನು ತೆಗೆಯುತ್ತಾರೋ ಅವರಿಗೆ ಧೈರ್ಯವಾಗಿಯೇ ಉತ್ತರ ನೀಡುತ್ತೇವೆ ಎಂದರು.
ಕೆಲ ಜನರು ದೇಶದ ವಿಭಜನೆ ಹಾಗೂ ಶಾಂತಿ ಕದಡುವುದನ್ನು ಬಯಸಿದ್ದಾರೆ. ಆದರೆ ಅವರು ರಾಷ್ಟ್ರೀಯ ಭದ್ರತಾ ಸಿಬ್ಬಂದಿಯನ್ನು ನೋಡಿ ಹೆದರಲೇಬೇಕು. ಅದರ ಮೇಲೂ ಅವರು ಮುಂದುವರಿದರೆ, ಅಂಥವರ ವಿರುದ್ಧ ಹೋರಾಡಿ ಸೋಲಿಸಬೇಕಾಗಿರುವುದು ಎನ್ಎಸ್ಜಿಯ ಜವಾಬ್ದಾರಿ. ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತಾ ನಿಯಮನವನ್ನು ಪಾಲನೆ ಮಾಡಿಕೊಂಡು ಬರುತ್ತಿದ್ದೇವೆ. ಅಲ್ಲದೆ, ಮೋದಿ ಅಧಿಕಾರವಧಿಯಲ್ಲಿ ಎನ್ಎಸ್ಜಿಯ ನಿರೀಕ್ಷೆಗಳನ್ನು ಖಂಡಿತವಾಗಿ ಈಡೇರಿಸುವುದಾಗಿ ಶಾ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


