12 ವರ್ಷದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ: ಅತ್ಯಾಚಾರ ಎಸಗಿ ಮರಕ್ಕೆ ನೇಣು ಹಾಕಿದ ಅಪ್ರಾಪ್ತರು
ಅಸ್ಸಾಂನಲ್ಲಿ 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಯುವಕರು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ಥ ಬಾಲಕಿಯನ್ನು ಮರಕ್ಕೆ ನೇಣು ಹಾಕಿ ಕೊಂದು ಹಾಕಿದ್ದಾರೆ.

ಗುವಾಹಟಿ: ಅಸ್ಸಾಂನಲ್ಲಿ 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಯುವಕರು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ಥ ಬಾಲಕಿಯನ್ನು ಮರಕ್ಕೆ ನೇಣು ಹಾಕಿ ಕೊಂದು ಹಾಕಿದ್ದಾರೆ.
ಅಸ್ಸಾಂನ ಬಿಸ್ವನಾಥ್ ಜಿಲ್ಲೆಯ ಗೋಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದ್ದು, ಅತ್ಯಾಚಾರ ಎಸಗಿದ ನಂತರ ಬಾಲಕಿಯನ್ನು ಮರಕ್ಕೆ ನೇಣು ಹಾಕಲಾಗಿದೆ. ಮೂಲಗಳ ಪ್ರಕಾರ ಸಾಮೂಹಿಕ ಅತ್ಯಾಚಾರ ಗೈದ ಆರೋಪಕ್ಕೆ ಸಂಬಂಧಿಸಿದಂತೆ 10ನೇ ತರಗತಿ ಪರೀಕ್ಷೆ ಮುಗಿಸಿದ್ದ 7 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರೀಕ್ಷೆ ನಂತರ ಪಾರ್ಟಿ ಆಯೋಜಿಸುವ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಶುಕ್ರವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನಂತರ ಮನೆಯ ಸಮೀಪದ ಕಾಡಿನಲ್ಲಿದ್ದ ಮರಕ್ಕೆ ನೇಣುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಬಾಲಕಿ ನಾಪತ್ತೆಯಾದ ಕುರಿತು ಬಾಲಕಿ ಪೋಷಕರು ಶೋಧ ನಡೆಸುತ್ತಿದ್ದಾಗ ಶನಿವಾರ ಬೆಳಗ್ಗೆ ಕಾಡಿನಲ್ಲಿ ಬಾಲಕಿಯ ಶನ ಪತ್ತೆಯಾಗಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


