ವದಂತಿಗಳನ್ನು ಹರಡಬೇಡಿ: ದೆಹಲಿ ಪೊಲೀಸ್ ಆಯುಕ್ತ ಎಸ್ ಎನ್ ಶ್ರೀವಾಸ್ತವ ಮನವಿ
ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಗೆ ಭಂಗ ತರುವ, ಕೋಮುಸೌಹಾರ್ದತೆಗೆ ಭಂಗ ತರುವಂತಹ ವದಂತಿಗಳನ್ನು ಹರಡದಂತೆ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಸಾರ್ವಜನಿಕರಲ್ಲಿ ಇಂದು ಮನವಿ ಮಾಡಿಕೊಂಡಿದ್ದಾರೆ.
ದೆಹಲಿಯ ಅನೇಕ ಕಡೆಗಳಲ್ಲಿ ಗಲಭೆಯ ಬಗೆಗಿನ ವದಂತಿಗಳ ಹಿನ್ನೆಲೆಯಲ್ಲಿ ನಾಗರಿಕರು ಆತಂಕಗೊಂಡ ಬೆನ್ನಲ್ಲೇ ಅವರು ಈ ರೀತಿಯ ಮನವಿ ಮಾಡಿಕೊಂಡಿದ್ದಾರೆ.
ದೆಹಲಿ ಪೊಲೀಸ್ ನಿಯಂತ್ರಣ ಕೊಠಡಿಗಳಿಂದ ಬರುವ ವದಂತಿಗಳನ್ನು ಜನರು ಪರಿಶೀಲಿಸಬೇಕು, ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ವದಂತಿಗಳ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.
ವದಂತಿಗಳಿಗೆ ಸಂಬಂಧಿಸಿದಂತೆ ಆರು ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಚಾರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


