ಪ್ರಧಾನಿ ಭೇಟಿಯಾದ ಕೇಜ್ರಿವಾಲ್: ದೆಹಲಿ ಹಿಂಸಾಚಾರ, ಕೊರೋನಾ ವೈರಸ್ ಬಗ್ಗೆ ಚರ್ಚೆ
ದೆಹಲಿಯಲ್ಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ದೆಹಲಿ ಹಿಂಸಾಚಾರ ಮತ್ತು ಕೊರೋನಾ ವೈರಸ್ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನವದೆಹಲಿ: ದೆಹಲಿಯಲ್ಲಿ ಸಿಎಂ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ದೆಹಲಿ ಹಿಂಸಾಚಾರ ಮತ್ತು ಕೊರೋನಾ ವೈರಸ್ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 47 ಮಂದಿ ಸಾವನ್ನಪ್ಪಿದ ಇತ್ತೀಚಿನ ಹಿಂಸಾಚಾರದ ಬಳಿಕ ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಕುರಿತು ಚರ್ಚಿಸಿದರು. ಅದೇ ರೀತಿ ಮಾರಣಾಂತಿಕ ಕೊರೋನಾವೈರಸ್ ಸೋಂಕು ಹರಡದಂತೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಸಂಸತ್ತಿನ ಆವರಣದಲ್ಲಿ ನಡೆದ ಸಭೆಯ ನಂತರ, ಕೇಜ್ರಿವಾಲ್ ಚರ್ಚೆ "ಫಲಪ್ರದ"ವಾಗಿತ್ತು ಎಂದು ತಿಳಿಸಿದರು. ಹಿಂಸಾಚಾರದ ತಪ್ಪಿತಸ್ಥರನ್ನು ಕಾನೂನಿನ ಮುಂದೆ ತಂದು ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಪ್ರಧಾನಮಂತ್ರಿಯನ್ನು ಕೋರಿರುವುದಾಗಿ ತಿಳಿಸಿದರು.
ಭಾನುವಾರ ಹರಡಿದ್ದ ವದಂತಿಗಳನ್ನು ಉಲ್ಲೇಖಿಸಿದ ಅವರು, ಪರಿಸ್ಥಿತಿಯನ್ನು ಚಾತುರ್ಯದಿಂದ ನಿಭಾಯಿಸುವಲ್ಲಿ ದೆಹಲಿ ಪೊಲೀಸರ ಕ್ರಮವನ್ನು ಶ್ಲಾಘಿಸಿದರು. ಇಲ್ಲಿಯವರೆಗೆ ಅನೇಕ ಶಂಕಿತ ಪ್ರಕರಣಗಳು ವರದಿಯಾಗಿರುವುದರಿಂದ ಮಾರಣಾಂತಿಕ ಕೊರೋನವೈರಸ್ ಹರಡುವುದನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಇದೇ ವೇಳೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


