ಜೈಪುರದಲ್ಲಿ ಇಟಲಿ ಪ್ರವಾಸಿಗನಿಗೆ ಕೊರೋನಾ ವೈರಸ್ ಪಾಸಿಟಿವ್: ದೇಶದಲ್ಲಿ ಆರು ಪ್ರಕರಣಗಳು ದೃಢ
ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 6 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.

ನವದೆಹಲಿ: ಜೈಪುರದಲ್ಲಿರುವ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟಾರೆ 6 ಮಂದಿಯಲ್ಲಿ ಈ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಇಂದು ತಿಳಿಸಿವೆ.
ಪ್ರವಾಸಿಗನಿಂದ ಸಂಗ್ರಹಿಸಲಾದ ಮಾದರಿಯನ್ನು ಶನಿವಾರ ಮೊದಲ ಬಾರಿಗೆ ಪರೀಕ್ಷೆ ನಡೆಸಿದಾಗ ನಗೆಟಿವ್ ಕಂಡುಬಂದಿತ್ತು. ಆದರೆ, ಆತನ ಸ್ಥಿತಿ ಕ್ಷೀಣಿಸಿದ್ದರಿಂದ ಸೋಮವಾರ ಮತ್ತೆ ಎರಡನೇ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಕಂಡುಬಂದಿದೆ.
ವರದಿಗಳಲ್ಲಿ ವ್ಯತ್ಯಾಸ ಕಂಡುಬಂದಿರುವುದರಿಂದ ಮಾದರಿಗಳನ್ನು ಪರೀಕ್ಷೆಗಾಗಿ ಪುಣೆಯಲ್ಲಿರುವ ನ್ಯಾಷಿನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ದೆಹಲಿ ಹಾಗೂ ಹೈದ್ರಾಬಾದ್ ನಲ್ಲಿ ಎರಡು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ವಿಶ್ವದಾದ್ಯಂತ ಸುಮಾರು 3, 100 ಜನರ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಸೋಂಕು ಹರಡದಂತೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


